ಕೇರಳದ ತಿರುವನಂತಪುರದಲ್ಲಿ ಯುವಕನೊಬ್ಬ ತನ್ನ ಕುಟುಂಬ ಸದಸ್ಯರು ಹಾಗೂ ಪ್ರೇಯಸಿ ಸೇರಿದಂತೆ ಐವರನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
23 ವರ್ಷದ ಆರೋಪಿ ಪೆರುಮಾಳದ ನಿವಾಸಿ ಅಫಾನ್ ಪೊಲೀಸರಿಗೆ ಶರಣಾಗಿ ಐವರು ಕುಟುಂಬ ಸದಸ್ಯರು ಮತ್ತು ಗೆಳತಿ ಸೇರಿದಂತೆ ಐದು ಜನರನ್ನು ಕೊಲೆ ಮಾಡಿದ್ದಾಗಿ ಹೇಳಿಕೊಂಡಿದ್ದಾನೆ. ಆರೋಪಿಯ ತಾಯಿ ಬದುಕುಳಿದಿದ್ದು, ಸ್ಥಿತಿ ಗಂಭೀರವಾಗಿದೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಈ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಆರೋಪಿಯು ಕುಟುಂಬ ಸದಸ್ಯರನ್ನು ಕೊಂದ ನಂತರ ವಿಷ ಸೇವಿಸಿದ್ದಾಗಿ ಹೇಳಿದ್ದು, ಪೊಲೀಸರು ಅವನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆರೋಪಿಯನ್ನು ಪೆರುಮಾಳದ ನಿವಾಸಿ ಅಫಾನ್ ಎಂದು ಗುರುತಿಸಲಾಗಿದೆ. ಮೂರು ಮನೆಗಳಲ್ಲಿ ವಾಸಿಸುತ್ತಿದ್ದ ಆರು ಜನರನ್ನು ತಾನು ಕೊಂದಿರುವುದಾಗಿ ಅಫಾನ್ ಒಪ್ಪಿಕೊಂಡಿದ್ದಾನೆ. ಆರೋಪಿಗಳ ಹೇಳಿಕೆಗಳ ತನಿಖೆಗೆ ಹೋದ ಪೊಲೀಸರು ಮೂರು ಮನೆಗಳಲ್ಲಿ ಆರು ಮಂದಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ.
ಗೆಳತಿ ಸೇರಿದಂತೆ ಆರೋಪಿಯು ಅಜ್ಜಿ ಸಲ್ಮಾಬಿ, ಸಹೋದರ ಅಫ್ಸಾನ್, ತಂದೆಯ ಸಹೋದರ ಲತೀಫ್, ಲತೀಫ್ ಪತ್ನಿ ಶಾಹಿದಾರನ್ನು ಕೊಲೆ ಮಾಡಿದ್ದಾನೆ. ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.