ಕುಂಭಮೇಳಕ್ಕೆ ತೆರಳಿದ್ದ ನಾಲ್ವರು ಕನ್ನಡಿಗರು ಎರಡು ಪ್ರತ್ಯೇಕ ಅಪಾಘಾತ ಪ್ರಕರಣಗಳಲ್ಲಿ ಮೃತಪಟ್ಟಿದ್ದಾರೆ.
ಗುಜರಾತ್ ನ ಪೋರ್ ಬಂದರ್ ಬಳಿ ಸಂಭವಿಸಿದ ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ನಿವಾಸಿಗಳಾದ ವಿಶ್ವನಾಥ ಅವಜಿ (55) ಮತ್ತು ಮಲ್ಲಿಕಾರ್ಜುನ ಸದ್ದಲಗಿ (40) ಮೃತಪಟ್ಟಿದ್ದಾರೆ.
ವಾಹನದಲ್ಲಿ ಒಟ್ಟು 17 ಮಂದಿ ಪ್ರಯಾಗ್ರಾಜ್ಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ನಿಂತಿದ್ದ ಟಿಪ್ಪರ್ಗೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಾಹನದಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಪೋರಬಂದರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮತ್ತೊಂದು ಪ್ರತ್ಯೇಕ ಅಪಘಾತ ಪ್ರಕರಣದಲ್ಲಿ ಕುಂಭಮೇಳದಿಂದ ಹಿಂತಿರುಗುತ್ತಿದ್ದ ಬೀದರ್ ನ ಇಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ವರ್ದಾ ಬಳಿ ಟಿಟಿ ಮತ್ತು ಲಾರಿ ನಡುವೆ ಡಿಕ್ಕಿ ಅಪಘಾತ ಸಂಭವಿಸಿದೆ. ಮೃತರು ಬೀದರ್ನ ಓಲ್ಡ್ ಸಿಟಿಯ ದರ್ಜಿಗಲ್ಲಿಯವರು ಎಂದು ತಿಳಿದುಬಂದಿದೆ. ಟಿಟಿಯಲ್ಲಿದ್ದ ಇನ್ನುಳಿದ 14 ಜನರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
5 ದಿನದ ಹಿಂದೆ 16 ಜನರು ಟೆಂಪೊ ಟ್ರಾವೆಲರ್ನಲ್ಲಿ ಉತ್ತರ ಪ್ರದೇಶದ ಪ್ರಯಾಗ್ರಾಜ್ ಕುಂಭಮೇಳಕ್ಕೆ ಹೋಗಿದ್ದರು. ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿ ನಂತರ ಕಾಶಿ, ರಾಮೇಶ್ವರ, ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ವಾಪಸ್ ಬೀದರ್ಗೆ ಬರುತ್ತಿದ್ದರು. ಮಂಗಳವಾರ ಬೆಳಗಿನ ಜಾವ ಟಿಟಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ.