ನವದೆಹಲಿ : ಪಿಎಂಕೆಎಸ್‌ವೈ ಅಡಿಯಲ್ಲಿ ರಾಜ್ಯದಿಂದ ಸಲ್ಲಿಸಲಾಗಿರುವ ಸುಮಾರು 3077 ಕೋಟಿ ರೂಪಾಯಿಗಳ ವಿವಿಧ ಪ್ರಸ್ತಾವನೆಗಳನ್ನು ಅನುಮೋದಿಸಿ, ಹೊಸ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅನುದಾನ ನೀಡಬೇಕು. ವಿಶಾಖಪಟ್ಟಣಂದಿಂದ ಮಹಿಬೂಬ್ ನಗರದವರೆಗೆ ಬರುವ ಎಕ್ಸಪ್ರಸ್ ರೈಲನ್ನು ರಾಯಚೂರುವರೆಗೆ ಸಂಚರಿಸಲು ಸೂಚಿಸಿ ಈ ಭಾಗದ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ಕೇಂದ್ರ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ತಿಳಿಸಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ವಿವಿಧ ಅಭಿವೃದ್ಧಿ ವಿಷಯಗಳನ್ನು ಚರ್ಚಿಸಿದರು.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಅಡಿಯಲ್ಲಿ ಸಲ್ಲಿಸಿದ ಪ್ರಸ್ತಾವನೆಗಳನ್ನು ಅನುಮೋದಿಸಿ ಅನುದಾನ ನೀಡುವ ಮೂಲಕ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು. ರಾಜ್ಯದ ಹಲವಾರು ಜಿಲ್ಲೆಗಳಿಗೆ ಅಗತ್ಯವಿರುವಂತಹ ಕಾಮಗಾರಿಗಳನ್ನು ಕೈಗೊಳ್ಳಲು 40%ರಾಜ್ಯ ಸರ್ಕಾರ 60% ಕೇಂದ್ರದ ಅನುಪಾತಲ್ಲಿ ಅನುದಾನ ಒದಗಿಸುವಂತೆ ಮನವಿ ಮಾಡಿದರು.
ರಾಯಚೂರಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ನಗರದಿಂದ ಮಿನಿ ವಿಧಾನಸೌಧಕ್ಕೆ ಸಂಪರ್ಕಿಸುವ ಯಕ್ಲಾಸ್ಪೂರ ರಸ್ತೆಯನ್ನು ಹಾದು ಹೊಗಿರುವ ರೈಲ್ವೆ ಸಂಪರ್ಕದ ಅಂಡರ್ ಪಾಸ್ ಬ್ರಿಡ್ಜ್ ಚಿಕ್ಕದಾಗಿದ್ದು ದ್ವಿಚಕ್ರ ವಾಹನಗಳು ಹೊರತುಪಡಿಸಿ ಬೇರೆ ಯಾವ ವಾಹನಗಳು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಕಾರಣ ಈ ಬ್ರಿಡ್ಜ್ ನ್ನು ದೊಡ್ಡದಾಗಿ ನಿರ್ಮಿಸಲು ಶೀಘ್ರ ಕ್ರಮ ಕೈಗೊಳ್ಳಬೇಕು ಸೇರಿದಂತೆ ರಾಯಚೂರು ನಿಲ್ದಾಣದಲ್ಲಿ ಎಕ್ಸಲೇಟರ್ ಅಳವಡಿಸಿ ರೈಲ್ವೆ ನಿಲ್ದಾಣದ ಅಭಿವೃದ್ಧಿಗಾಗಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ರಾಜ್ಯದಲ್ಲಿ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ರಾಜ್ಯದ ಅಂತರ್ಜಲ ಸುಸ್ಥಿರ ನಿರ್ವಹಣೆ ಹಾಗೂ ಅಂತರ್ಜಲ ನೀರಿನ ಭದ್ರತೆಗಾಗಿ
ಅಟಲ್ ಭೂಜಲ ಯೋಜನೆ ಅಡಿಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಸದರಿ ಯೋಜನೆಯನ್ನು ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನ ಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು.
ರೈತರ ಜೀವನಾಡಿಯಾಗಿರುವ ತುಂಗಭದ್ರ ನದಿಯ ಅತ್ಯಂತ ಹಳೆಯ ಆಣೆಕಟ್ಟಾಗಿರುವುದರಿಂದ ಆಂಧ್ರ, ತೆಲಂಗಾಣ ಹಾಗೂ ಕರ್ನಾಟಕ ಸಹಕಾರದೊಂದಿಗೆ ಆಣೇಕಟ್ಟು ಬಲವರ್ಧನೆಯ ಕುರಿತು ಮಾತನಾಡಬೇಕಾಗಿದೆ. ಈ ಆಣೆಕಟ್ಟನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದರು.
ಈ ಸಂಧರ್ಭದಲ್ಲಿ ಕರ್ನಾಟಕ ರಾಜ್ಯದ ದೆಹಲಿ ವಿಶೇಷ ಪ್ರತಿನಿಧಿಯಾಗಿರುವ ಟಿ.ಬಿ ಜಯಚಂದ್ರ, ಅವರು ಉಪಸ್ಥಿತರಿದ್ದರು.