Wednesday, February 26, 2025
Menu

ಎಸ್ಸೆಸ್ಸೆಲ್ಸಿ, ಸೆಕೆಂಡ್‌ ಪಿಯು ಪರೀಕ್ಷಾರ್ಥಿಗಳಿಗೆ ಕೆಎಸ್ಸಾರ್ಟಿಸಿಯಿಂದ ಉಚಿತ ಪ್ರಯಾಣ

ಎಸ್ಸೆಸ್ಸೆಲ್ಸಿ (10ನೇ ತರಗತಿ) ಮತ್ತು ದ್ವಿತೀಯ ಪಿಯುಸಿ (12ನೇ ತರಗತಿ) ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯ ಸಮಯದಲ್ಲಿ ಉಚಿತ ಬಸ್ ಪ್ರಯಾಣವನ್ನು ಒದಗಿಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಕಟಿಸಿದೆ.

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ (ನಗರ, ಉಪನಗರ, ಸಾಮಾನ್ಯ ಮತ್ತು ಎಕ್ಸ್‌ಪ್ರೆಸ್) ತಮ್ಮ ನಿವಾಸದಿಂದ ಅವರಿಗೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಡಲಾಗುವುದು ಎಂದು ನಿಗಮ ತಿಳಿಸಿದೆ.

ಮಾರ್ಚ್ 1ರಿಂದ 20ರವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಮತ್ತು ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ಹಾಜರುಪಡಿಸಿ ಈ ಸೌಲಭ್ಯವನ್ನು ಪಡೆಯಬಹುದು ಎಂದು ಹೇಳಿಕೆ ನಿಗಮ ತಿಳಿಸಿದೆ.

Related Posts

Leave a Reply

Your email address will not be published. Required fields are marked *