Wednesday, February 26, 2025
Menu

ಎಚ್.ಡಿಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ತನಿಖೆಗೆ ಎಸ್ ಐಟಿ ರಾಜ್ಯಪಾಲರ ಮೊರೆ

hd kumarswamy

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಶೇಷ ತನಿಖಾ ತಂಡ ಪ್ರಾಸಿಕ್ಯೂಷನ್ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದೆ.

ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆಗೆ ಅಕ್ರಮವಾಗಿ ಜಮೀನು ನೀಡಿದ ಪ್ರಕರಣದಲ್ಲಿ ಎಚ್. ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಬುಧವಾರ ವಿಶೇಷ ತನಿಖಾ ತಂಡ ರಾಜ್ಯಪಾಲರ ಅನುಮತಿ ಕೇಳಿದೆ.

ಎಸ್ ಐಟಿ ಈ ಹಿಂದೆಯೇ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿತ್ತು. ಆದರೆ ರಾಜ್ಯಪಾಲರು ಕನ್ನಡದಲ್ಲಿ ಇರುವ ದೋಷಾರೋಪ ಪಟ್ಟಿಯನ್ನು ಇಂಗ್ಲೀಷ್ ಗೆ ಭಾಷಾಂತರ ಮಾಡಿ ಸಲ್ಲಿಸುವಂತೆ ವಾಪಸ್ ಕಳುಹಿಸಿದ್ದರು.

ಇದೀಗ ಸುಮಾರು 5000 ಪುಟಗಳ ದೋಷಾರೋಪಣಾ ಪಟ್ಟಿಯಲ್ಲಿ ಇಂಗ್ಲೀಷ್ ಗೆ ಭಾಷಾಂತರ ಮಾಡಿ ರಾಜ್ಯಪಾಲರಿಗೆ ಕಳುಹಿಸಿಕೊಟ್ಟಿರುವ ಎಸ್ ಐಟಿ, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಕೋರಿದೆ.

ಸುಮಾರು 5000 ಪುಟಗಳ ದೋಷಾರೋಪ ಪಟ್ಟಿ ತರ್ಜುಮೆ ಮಾಡಿರುವ ಎಸ್‌ಐಟಿ ಅಧಿಕಾರಿಗಳು ಅದನ್ನು ರಾಜಭವನಕ್ಕೆ ತಲುಪಿಸಿದ್ದಾರೆ. ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿದ್ದಾರೆ.

ಡಿನೋಟಿಫಿಕೇಶನ್ ಪ್ರಕರಣದಲ್ಲಿ ಎಚ್.ಡಿ. ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಇದೀಗ ಎಸ್ ಐಟಿ ಪೊಲೀಸರು ಪ್ರಾಸಿಕ್ಯೂಷನ್ ಗೆ ಮನವಿ ಮಾಡಿದ್ದಾರೆ. ಇದರಿಂದ ಎಚ್.ಡಿ. ಕುಮಾರಸ್ವಾಮಿಗೆ ಸಂಕಷ್ಟಗಳ ಮೇಲೆ ಸಂಕಷ್ಟ ಶುರುವಾದಂತಾಗಿದೆ.

Related Posts

Leave a Reply

Your email address will not be published. Required fields are marked *