Wednesday, February 04, 2026
Menu

ಮದ್ದೂರಿನಲ್ಲಿ ಬಸ್‌ ಚಕ್ರಕ್ಕೆ ತಲೆಕೊಟ್ಟು ಯುವಕ ಆತ್ಮಹತ್ಯೆ

ಮಂಡ್ಯದ ಮದ್ದೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತೂಬಿನಕೆರೆ ಗ್ರಾಮದ ಅರುಣ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಬಸ್ ಬೆಂಗಳೂರು -ಮೈಸೂರು ಹೆದ್ದಾರಿಗೆ ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಅರುಣ್ ಏಕಾಏಕಿ ಬಸ್ಸಿನ ಹಿಂಬದಿ ಚಕ್ರಕ್ಕೆ ತಲೆಕೊಟ್ಟಿದ್ದಾನೆ. ಬಸ್ಸಿನ ಹಿಂಬದಿ ಚಕ್ರ ಯುವಕನ ತಲೆ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಆತ ಅಸು ನೀಗಿದ್ದಾನೆ.

ಯುವಕ ಆತ್ಮಹತ್ಯೆಗೆ ಶರಣಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮದ್ದೂರು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Posts

Leave a Reply

Your email address will not be published. Required fields are marked *