ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ನಾಗೇನಹಳ್ಳಿ ನಿವಾಸಿ ಲಿಂಗಮ್ಮ ಎಂದು ಗುರುತಿಸಲಾಗಿದೆ.
ಮಹಿಳೆ ಬಸ್ ಇಳಿದು ರಸ್ತೆ ದಾಟುವಾಗ ವೇಗವಾಗಿ ಬಂದಿದ್ದ ಬಿಎಂಟಿಸಿ ಬಸ್ ಡಿಕ್ಕಿಯಾಗಿತ್ತು. ಮಹಿಳೆ ಗಂಭೀರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಅಸು ನೀಗಿದ್ದಾರೆ.
ಈ ಸಂಬಂಧ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.