“ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆ ಮಾಡಲು ಮುಂದಾಗಿರುವ ಬಗ್ಗೆ ಕೇಳಿದಾಗ, “ಕೇಂದ್ರ ಸರ್ಕಾರ ಸಂಸತ್ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಲು ಮುಂದಾಗಿರುವುದನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತದೆ. ಇದು ಸರಿಯಲ್ಲ. ಇದರ ವಿರುದ್ಧ ಚುನಾವಣಾ ಆಯೋಗ, ನ್ಯಾಯಾಲಯಗಳ ಮೂಲಕ ನಾವು ಹೋರಾಟ ಮಾಡುತ್ತೇವೆ” ಎಂದು ತಿಳಿಸಿದರು.
30 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಆಗಿರುವ ಕಾಪು ಹೊಸ ಮಾರಿಗುಡಿ ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವ ನಡೆಯುತ್ತಿದೆ. ಇಂದು ದೇವರ ಪ್ರತಿಷ್ಠಾಪನೆ ನಡೆಯಲಿದೆ. ಡಿ.ಕೆ ಶಿವಕುಮಾರ್ ದೇಗುಲಕ್ಕೆ ಭೇಟಿ ಕೊಡಲಿದ್ದಾರೆ. ಉಡುಪಿ ಕಾಂಗ್ರೆಸ್ ಭವನದಲ್ಲಿ ನಾಯಕರ ಭೇಟಿಯಾಗಿ, ಕಾರ್ಕಳದಲ್ಲಿ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗಿಯಾಗಲಿದ್ದಾರೆ.