Menu

ಹುಣಸೂರು ತೋಟದ ಮನೆಯಲ್ಲಿ ವೃದ್ಧ ದಂಪತಿಯ ಹತ್ಯೆ

ಹುಣಸೂರು ತಾಲೂಕಿನ ನಾಡಪ್ಪನಹಳ್ಳಿಯ ತೋಟದ ಮನೆಯಲ್ಲಿ ಹಾಡಹಗಲೇ ಕಲ್ಲಿನಿಂದ ಜಜ್ಜಿ ವೃದ್ಧ ದಂಪತಿಯನ್ನು ಕೊಲೆ ಮಾಡಿರುವುದು ಪತ್ತೆಯಾಗಿದೆ.

ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿಗೌಡ(65) ಹಾಗೂ ಪತ್ನಿ ಶಾಂತಮ್ಮ (52) ಕೊಲೆಯಾದವರು. ದಂಪತಿಗೆ ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬ ಮಗಳಿದ್ದಾರೆ. ಮಗ ದೇವರಾಜ್ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದಾರೆ.

ಸೋಮವಾರ ಸಂಜೆ ದೇವರಾಜ್ ಜಮೀನಿನಲ್ಲಿ ಶುಂಠಿ ಕೀಳುತ್ತಿದ್ದರು. ಶುಂಠಿ ತುಂಬಲು ಕುಕ್ಕೆ ತರುವಂತೆ ಗಣೇಶ ಎಂಬಾತನನ್ನು ತಂದೆ ಇರುವ ತೋಟದ ಮನೆಗೆ ಕಳುಹಿಸಿದ್ದರು. ಆತ ಹೋದಾಗ ಮನೆಯೊಳಗೆ ಶಾಂತಮ್ಮ ಹಾಗೂ ದನದ ಕೊಟ್ಟಿಗೆಯಲ್ಲಿ ರಂಗಸ್ವಾಮಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ದೇವರಾಜ್​ಗೆ ವಿಷಯ ತಿಳಿಸಿದ್ದ.

ದೇವರಾಜ್ ಮನೆಗೆ ಬಂದು ನೋಡುವಷ್ಟರಲ್ಲಿ ಇಬ್ಬರೂ ಮೃತಪಟ್ಟಿದ್ದರು. ಬಿಳಿಕೆರೆ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸ್ ಇನ್ಸ್‌ಪೆಕ್ಟರ್ ಲೋಲಾಕ್ಷಿ, ಡಿವೈಎಸ್​​ಪಿ ಗೋಪಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತೋಟದ ಮನೆಯಲ್ಲಿ ವಾಸವಿರುವ ರಂಗಸ್ವಾಮಿಗೌಡ ಮತ್ತವರ ಪತ್ನಿಯನ್ನು ಯಾರು ಮತ್ತು ಯಾವ ಕಾರಣಕ್ಕೆ ಕೊಲೆ ಮಾಡಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಬಿಳಿಕೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *