ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕನ್ನಡದ ಮಾಣಿಕ್ಯ ಚಿತ್ರದ ನಟಿ ಹಾಗೂ ಐಪಿಎಸ್ ಅಧಿಕಾರಿ ಪುತ್ರಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ವಿದೇಶದಿಂದ 14.8 ಕೆಜಿ ಚಿನ್ನವನ್ನು ಕಳ್ಳಸಾಗಾಣೆ ಮಾಡುತ್ತಿದ್ದಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ಅವರನ್ನು ಡಿಆರ್ ಐ ಅಧಿಕಾರಿಗಳು ಬಂಧಿಸಿದ್ದಾರೆ.
ಕಿಚ್ಚ ಸುದೀಪ್ ಮತ್ತು ರವಿಚಂದ್ರನ್ ನಟಿಸಿದ್ದ ಸೂಪರ್ ಹಿಟ್ ಚಿತ್ರವಾದ ಮಾಣಿಕ್ಯ ಚಿತ್ರದಲ್ಲಿ ರನ್ಯಾ ನಾಯಕಿ ನಟಿಯಾಗಿ ಅಭಿನಯಿಸಿದ್ದರು. ಈಕೆ ಐಪಿಎಸ್ ಅಧಿಕಾರಿಯ ಮಗಳೂ ಆಗಿದ್ದಾರೆ.
ಸೋಮವಾರ ತಡರಾತ್ರಿ 11 ಗಂಟೆ ಸುಮಾರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿದೇಶದಿಂದ ದೆಹಲಿ ಮೂಲಕ ಚಿನ್ನವನ್ನು ಕಳ್ಳಸಾಗಾಣೆ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.