ಆಹಾರ ಪ್ರಿಯರು ಬಾಯಿ ಚಪ್ಪರಿಸಿ ಸವಿಯುವ ಟೊಮೆಟೊ ಸಾಸ್ಗೆ ಅಪಾಯಕಾರಿ ರಾಸಾಯಾನಿಕ ಬಳಸುತ್ತಿರುವುದು ಆಹಾರ ಸುರಕ್ಷತಾ ಇಲಾಖೆ ವರದಿಯಲ್ಲಿ ದೃಢವಾಗಿದೆ. ಇದು ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತದೆ ಎಂದು ವರದಿ ಹೇಳಿದೆ.
ವಿವಿಧ ಆಹಾರ ಪದಾರ್ಥಗಳಲ್ಲಿ ರಾಸಾಯನಿಕ ಬಳಕೆಯಾಗುತ್ತಿರುವ ಆರೋಪ ಕೇಳಿಬಂದ ಬೆನ್ನಲ್ಲೇ ಆಹಾರ ಸುರಕ್ಷತಾ ಇಲಾಖೆ ಟೊಮೆಟೊ ಸಾಸ್ ತಪಾಸಣೆಗೂ ಮುಂದಾಗಿತ್ತು. ಕಳೆದ ಫೆಬ್ರವರಿಯಲ್ಲಿ ಟೊಮೆಟೊ ಸಾಸ್ ಮಾದರಿಗಳನ್ನ ಪಡೆದು ಪ್ರಯೋಗಾಲಯಕ್ಕೆ ಕಳುಹಿಸಿತ್ತು. ಇದೀಗ ವರದಿ ಅಧಿಕಾರಿಗಳ ಕೈ ಸೇರಿದ್ದು,
ಟೊಮೆಟೊ ಸಾಸ್ಗಳಲ್ಲಿ ಸೋಡಿಯಂ ಬೆಂಜೊಯೆಟ್ ಎನ್ನುವ ಹಾನಿಕಾರಕ ರಾಸಾಯನಿಕಗಳನ್ನು ಬಳಸಲಾಗಿತ್ತು. ಇದರಲ್ಲಿ ಉಪ್ಪಿನ ಅಂಶ ಅಧಿಕ ಪ್ರಮಾಣದಲ್ಲಿರುತ್ತದೆ. ಜೊತೆಗೆ ಟೊಮೆಟೊ ಸಾಸ್ ಬ್ರೈಟ್ ಮತ್ತು ರೆಡ್ ಆಗಿ ಕಾಣಿಸಲು ಕೃತಕ ಕಲ್ಲರ್ ಬಳಸಲಾಗುತ್ತದೆ. ಈ ಸಾಸ್ನಲ್ಲಿ ರಾಸಾಯನಿಕ ಬಳಕೆಯಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.