ಅನುಮತಿ ನೀಡದೇ ಇದ್ದರೂ ವನ್ಯಜೀವಿ ಪ್ರದೇಶದಲ್ಲಿ ಚಿತ್ರೀಕರಣ ನಡೆಸಿದ್ದಕ್ಕಾಗಿ ನಿರ್ದೇಶಕ ತರುಣ್ ಸುಧೀರ್ ನಿರ್ಮಾಣದ ಚಿತ್ರದ ಉಪಕರಣಗಳನ್ನು ಅರಣ್ಯ ಇಲಾಖೆ ಸೀಜ್ ಮಾಡಿದೆ.
ತುಮಕೂರಿನ ನಾಮದ ಚಿಲುಮೆಯಲ್ಲಿ ಅನುಮತಿ ಇಲ್ಲದೇ ಅರಣ್ಯ ಭೂಮಿಯಲ್ಲಿ ತರುಣ್ ಸುಧೀರ್ ಸಿನಿಮಾದ ಚಿತ್ರೀಕರಣ ನಡೆಸುತ್ತಿದ್ದಾಗ ಸಹಾಯಕ ಸಂರಕ್ಷಣಾಧಿಕಾರಿ ಪವಿತ್ರಾ ನೇತೃತ್ವದ ತಂಡ ದಾಳಿ ನಡೆಸಿದೆ.
ಅನುಮತಿ ಇಲ್ಲದೇ ಇದ್ದರೂ ಕಳೆದ ನಾಲ್ಕೈದು ದಿನಗಳಿಂದ ಚಿತ್ರೀಕರಣ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ಮಾಡಿ ಚಿತ್ರೀಕರಣ ನಡೆಸುತ್ತಿದ್ದ ಟಿಟಿ ವಾಹನ, ಚೇರುಗಳು ಸೇರಿದಂತೆ ಹಲವು ಉಪಕರಣಗಳನ್ನು ವಶಕ್ಕೆ ಪಡೆದಿದೆ.
ತರುಣ್ ಸುಧೀರ್ ನಿರ್ಮಾಣದ ಇನ್ನೂ ಹೆಸರಿಡದ ಚಿತ್ರದಲ್ಲಿ ನಟಿ ರಕ್ಷಿತಾ ಸೋದರ ರಾಣಾ, ಪ್ರಿಯಾಂಕಾ ಮುಂತಾದವರು ನಟಿಸುತ್ತಿದ್ದಾರೆ.