Menu

ಕೆಪಿಎಸ್ಸಿ ಕಾಯ್ದೆ 1959ಕ್ಕೆ ತಿದ್ದುಪಡಿಗೆ ಸಂಪುಟ ನಿರ್ಧಾರ

ಕರ್ನಾಟಕ ಲೋಕಸೇವಾ ಆಯೋಗದ ಅವ್ಯವಹಾರ, ಭ್ರಷ್ಟಾಚಾರ ಸೇರಿದಂತೆ ನಡೆದಿರುವ ಹಲವು ಎಡವಟ್ಟುಗಳಿಂದ ಸರ್ಕಾರದ ವಿರುದ್ಧ ಕೇಳಿ ಬಂದ ವ್ಯಾಪಕ ಆಕ್ರೋಶದ ಬಳಿಕ ರಾಜ್ಯಸರ್ಕಾರ ಕೆಪಿಎಸ್ಸಿ ಕಾಯ್ದೆ 1959ಕ್ಕೆ ತಿದ್ದುಪಡಿ ತರಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ತಿದ್ದುಪಡಿ ಮಸೂದೆ ಪ್ರಕಾರ ನೇಮಕಾತಿ ಸಂದರ್ಶನ ಮಂಡಳಿಯಲ್ಲಿ ಆಯೋಗ ನಿಯೋಜಿಸಬಹುದಾದ ಒಬ್ಬ ಸದಸ್ಯ ಮಾತ್ರ ಇರಲಿದ್ದಾರೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ರಾಜ್ಯ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿ ನಿಯಮದಲ್ಲಿ ಇರುವಂತೆ ಸಂದರ್ಶನ ನಡೆಸಬೇಕು ಎಂದು ತಿದ್ದುಪಡಿ ಮಾಡಲಾಗುತ್ತದೆ. ಪ್ರಸ್ತುತ ನಿಯಮದಲ್ಲಿ ಆಯೋಗ ನಿಯೋಜಿಸಿದ ಇಬ್ಬರು ಅಥವಾ ಹೆಚ್ಚು ಸದಸ್ಯರು ಅಭ್ಯರ್ಥಿಗಳ ಸಂದರ್ಶನ ನಡೆಸಬಹುದಾಗಿದೆ.

ಈ ಸಂದರ್ಶನದ ಫಲಿತಾಂಶಗಳನ್ನು ಆಯೋಗದ ಮುಂದೆ ಮಂಡಿಸಿ, ಅಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಬೇಕು ಎಂಬ ಅಂಶ ಇದೆ. ಇದು ಸ್ವಜನ ಪಕ್ಷಪಾತ, ಅಕ್ರಮಕ್ಕೆ ಎಡೆ ಮಾಡಿ ಕೊಟ್ಟಿದೆ ಎಂಬ ಆರೋಪವಿತ್ತು. ಅದನ್ನು ಬದಲಾಯಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ತಿದ್ದುಪಡಿಯಂತೆ ಆಯೋಗದ ಸಭೆಗೆ ಅಧ್ಯಕ್ಷರನ್ನು ಸೇರಿಸಿ ಒಟ್ಟು ಸದಸ್ಯರ ಪೈಕಿ ಶೇ 50ರಷ್ಟು ಕೋರಂ ಅಗತ್ಯ ಇದೆ ಎಂದು ಬದಲಾಯಿಸಲಾಗುವುದು‌. ಈ ಹಿಂದೆ ಅಧ್ಯಕ್ಷರು ಇಲ್ಲದಿದ್ದರೂ ಶೇ 50ರಷ್ಟು ಎಂದಿತ್ತು. ಆಯೋಗದ ಎಲ್ಲ ನಿರ್ಣಯಗಳು ಎಲ್ಲ ಸದಸ್ಯರಿಗೂ ಮುಕ್ತ ಆಗಿರಬೇಕು. ಒಂದು ವೇಳೆ ಆಯೋಗದ ನಿರ್ಣಯಗಳ ಸಂಬಂಧ ಸದಸ್ಯ ಭಿನ್ನಾಭಿಪ್ರಾಯ ಹೊಂದಿದ್ದರೆ, ಅದಕ್ಕೆ ಕಾರಣದೊಂದಿಗೆ ದಾಖಲಿಸಬೇಕು.

Related Posts

Leave a Reply

Your email address will not be published. Required fields are marked *