ಬೆಂಗಳೂರು ಸೇರಿದಂತೆ ದೇಶಾದ್ಯಂತ ಎಸ್ ಡಿಪಿಐ ಕಚೇರಿ ಮೇಲೆ ಗುರುವಾರ ಬೆಳಿಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಕಬ್ಬನ್ ಪೇಡೆಯಲ್ಲಿರುವ ಎಸ್ ಡಿಪಿಐ ಕಚೇರಿ ಮೇಲೆ ಇಡಿ ದಾಳಿ ನಡೆಸಿದೆ. ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಇತ್ತೀಚೆಗೆ ಎಸ್ ಡಿಪಿಐ ಮುಖಂಡ ಎಂಕೆ ಫೈಜಿ ಅವರನ್ನು ಬಂಧಿಸಿದ್ದ ಇಡಿ ಅಧಿಕಾರಿಗಳು ವಿಚಾರಣೆ ದೊರೆತ ಮಾಹಿತಿ ಆಧರಿಸಿ ದಾಳಿ ನಡೆದಿದೆ ಎಂದು ಹೇಳಲಾಗಿದೆ.
PFI ಸಂಘಟನೆ ನಿಷೇಧದ ನಂತರ SDPI ಬ್ಯಾಂಕ್ ಖಾತೆಗಳಿಗೆ ವಿದೇಶಗಳಿಂದ ಹಣ ಹರಿದು ಬರುತ್ತಿದೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು ಅಲ್ಲದೇ ದೆಹಲಿ, ಕೇರಳ, ಆಂಧ್ರಪ್ರದೇಶ, ಉತ್ತರ ಪ್ರದೇಶದ ಲಕ್ನೋ ಸೇರಿದಂತೆ ಹಲವು ಎಸ್ ಡಿಪಿಐ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.
ಪಿಎಫ್ ಐಗೆ ಬಂದ ಹಣವನ್ನು ಎಸ್ ಡಿಪಿಐ ಬಳಸಿಕೊಳ್ಳುತ್ತಿದ್ದು, ರಾಜಕೀಯ ಉದ್ದೇಶಗಳಿಗೆ ಬಳಸಲಾಗುತ್ತದೆ ಎಂಬ ಆರೋಪದ ಮೇಲೆ ದಾಳಿ ನಡೆಸಲಾಗಿದೆ.