Menu

ಕೊಡವ ಹೆರಿಟೇಜ್ ಕೇಂದ್ರ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ:  ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್

hk patil

ಬೆಂಗಳೂರು: ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿಯನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಬರುವ ಆರ್ಥಿಕ ವರ್ಷದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್. ಕೆ. ಪಾಟೀಲ್ ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಕುಶಾಲಪ್ಪ ಎಂ.ಪಿ (ಸುಜಾ) ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 2013-14ನೇ ಸಾಲಿನಲ್ಲಿ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿಯನ್ನು 268.04 ಲಕ್ಷಗಳ ಅಂದಾಜು ವೆಚ್ಚದಲ್ಲಿ ಪ್ರಾರಂಭಿಸಲಾಯಿತು. ನಂತರ ಈ ಕಾಮಗಾರಿಯನ್ನು ರೂ 330.45 ಲಕ್ಷಗಳಲ್ಲಿ ಮುಗಿಸಲು ಆಡಳಿತಾತ್ಮಕ ಅನುಮೋದನೆಯನ್ನು ಮಡೆದುಕೊಂಡು 6 ಕಂತುಗಳಲ್ಲಿ ಹಣ ಬಿಡುಗಡೆ ಮಾಡಲಾಗಿದೆ. ಆದರೆ ಇನ್ನೂ ಈ ಕಾಮಗಾರಿ ಪೂರ್ಣಗೊಂಡಿರುವುದಿಲ್ಲ ಎಂದರು.

ಸಿ.ಎಸ್.ಆರ್. ಅನುದಾನದಡಿಯಲ್ಲಿ ಕಾಮಗಾರಿಯನ್ನು ಮಾಡಲು ಕೊಡಗು ಜಿಲ್ಲಾಧಿಕಾರಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ಕೋರಲಾಗಿತ್ತು. ಆದರೆ ಜಿಲ್ಲಾಧಿಕಾರಿಗಳು ಹಾಗೂ ಕೊಡಗು ಜಿಲ್ಲೆಯ ಮಡಕೇರಿಯ ಅಧ್ಯಕ್ಷರು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಅವರು ಕಾಮಗಾರಿಯನ್ನು ಸಿಎಸ್.ಆರ್. ಅನುದಾನದಲ್ಲಿ ಕೈಗೊಂಡು ನಿರ್ವಹಣೆ ಮಾಡಲು ಕಷ್ಟಸಾಧ್ಯ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸದರಿ ಕಾಮಗಾರಿಯನ್ನು ಪಿ.ಪಿ.ಪಿ ಮಾದರಿಯಲ್ಲಿ ಪೂರ್ಣಗೊಳಿಸಿ ನಿರ್ವಹಣೆ ಹಾಗೂ ಕಾರ್ಯಚರಣೆ ಮಾಡುವ ಬಗ್ಗೆ ಮಾರ್ಗದರ್ಶನ ಕೋರಿ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಿಗೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ. ಈ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Related Posts

Leave a Reply

Your email address will not be published. Required fields are marked *