ನಮ್ಮ ಮೆಟ್ರೋ ಯೋಜನೆಯನ್ನು ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಅನುದಾನ ಮೀಸಲಿಟ್ಟಿದ್ದಾರೆ.
ಬುಧವಾರ ಮಂಡಿಸಿದ ದಾಖಲೆಯ 16ನೇ ಬಜೆಟ್ ನಲ್ಲಿ ಮೆಟ್ರೋ ರೈಲು ಮಾರ್ಗವನ್ನು 79.65 ಕಿ.ಮೀ.ನಿಂದ 89.60 ಕಿ.ಮೀ.ವರೆಗೆ ವಿಸ್ತರಿಸಲಾಗುವುದು ಎಂದರು.
ಮೆಟ್ರೋ ರೈಲು ವಿಸ್ತರಣೆಗೆ 8900 ಕೋಟಿ ರೂ. ಮೀಸಲಿಡಲಾಗುವುದು. ಇದರಲ್ಲಿ ಮೆಟ್ರೋ ರೈಲು ಮಾರ್ಗವನ್ನು ದೇವನಹಳ್ಳಿ ವಿಮಾನ ನಿಲ್ದಾಣದವರೆಗೆ ವಿಸ್ತರಿಸಲಾಗುವುದು ಎಂದು ಅವರು ಹೇಳಿದರು.