ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಅಭಿವೃದ್ದಿಗೆ ಹಲವಾರು ಯೋಜನೆಗಳನ್ನು ಘೋಷಿಸುವ ಮೂಲಕ ಬಂಪರ್ ಘೋಷಣೆಗಳನ್ನು ಮಾಡಿದ್ದಾರೆ.
ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಬುಧವಾರ ಮಂಡಿಸಿದ 2025-26ನೇ ಸಾಲಿನಲ್ಲಿ ರಾಜಧಾನಿ ಬೆಂಗಳೂರಿನ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಕಳೆದ ಸಾಲಿಗಿಂತ ಈ ಬಾರಿ 2000 ಕೋಟಿ ಹೆಚ್ಚುವರಿ ಹಣ ಸೇರಿದಂತೆ ಒಟ್ಟಾರೆ 7000 ಕೋಟಿ ರೂ. ಮೀಸಲಿಟ್ಟಿದ್ದಾರೆ.
40.50 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ಫ್ಲೈವರ್ ಓವರ್ ನಿರ್ಮಾಣಕ್ಕಾಗಿ 8900 ಕೋಟಿ ರೂ. ಮೀಸಲಿಟ್ಟಿದ್ದಾರೆ. ಅಲ್ಲದೇ ಬ್ರ್ಯಾಂಡ್ ಬೆಂಗಳೂರು ಅಭಿವೃದ್ಧಿಗೆ 1800 ಕೋಟಿ ರೂ. ಮೀಸಲಿಟ್ಟಿದ್ದರೆ, ಡಿಸಿಎಂ ಡಿಕೆ ಶಿವಕುಮಾರ್ ಕನಸಿನ ಯೋಜನೆಯಾದ ಸುರಂಗ ಮಾರ್ಗ ನಿರ್ಮಾಣಕ್ಕಾಗಿ 19 ಸಾವಿರ ಕೋಟಿ ರೂ. ನೀಡಿದ್ದಾರೆ.
ಬೆಂಗಳೂರಿನಲ್ಲಿ ಔಟರ್ ರಿಂಗ್ ರೋಡ್ ಯೋಜನೆಗೆ 20 ಸಾವಿರ ಕೋಟಿ ರೂ. ಮಂಜೂರು ಮಾಡಿದ್ದಾರೆ. ಅಲ್ಲದೇ ಸಿಗ್ನಲ್ ಫ್ರೀ ರಸ್ತೆ ನಿರ್ಮಾಣ, ನಗರದಲ್ಲಿ ಹೆಚ್ಚುವರಿಯಾಗು 7500 ಸಿಸಿಟಿವಿ ಕ್ಯಾಮರಾ ಅಳವಡಿಕೆ ಸೇರಿದಂತೆ ಹಲವು ಯೋಜನೆಗಳಿಗೆ ಭಾರೀ ಮೊತ್ತದ ಹಣವನ್ನು ಮೀಸಲಿಡುವ ಮೂಲಕ ಸಿದ್ದರಾಮಯ್ಯ ಬೆಂಗಳೂರಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ.