ಭಾರೀ ಚರ್ಚೆಗೆ ಕಾರಣವಾಗಿದ್ದ ಮಲ್ಟಿಫ್ಲೆಕ್ಸ್ ಚಿತ್ರಮಂದಿರಗಳ ಟಿಕೆಟ್ ದರ ನಿಗದಿ ಸೇರಿದಂತೆ ಹಲವು ಕೊಡುಗೆಗಳನ್ನು ಘೋಷಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಈ ಬಾರಿಯ ಕರ್ನಾಟಕ ರಾಜ್ಯ ಬಜೆಟ್ ನಲ್ಲಿ ಘೋಷಿಸಲಾಗಿದೆ.
ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಮಂಡಿಸಿದ 20225-26 ನೇ ಸಾಲಿನ ಬಜೆಟ್ ನಲ್ಲಿ ಮಲ್ಟಿಫ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200ರೂ.ಗೆ ನಿಗದಿಪಡಿಸಿದರು.
ಇದೇ ವೇಳೆ ಕನ್ನಡದ ಚಾರಿತ್ರಿಕ ಹಾಗೂ ಐತಿಹಾಸಿಕ ಚಿತ್ರಗಳು ಅಲ್ಲದೇ ಡಾಕ್ಯೂಮೆಂಟರಿಗಳ ಸಂರಕ್ಷಣೆಗಾಗಿ ಕನ್ನಡ ಚಲನಚಿತ್ರ ಭಂಡಾರ ಸ್ಥಾಪನೆ ಮಾಡುವುದಾಗಿ ಘೋಷಿಸಿದರು.
ಕನ್ನಡ ಚಿತ್ರಗಳಿಗೆ ಓಟಿಟಿಯಲ್ಲಿ ವೇದಿಕೆ ಸ್ಥಾಪಿಸಲು 3 ಕೋಟಿ ರೂ. ಪ್ರೋತ್ಸಾಹಧನ ಘೋಷಿಸಿದ ಸಿಎಂ ಸಿದ್ದರಾಮಯ್ಯ, ಮೈಸೂರಿನಲ್ಲಿ ಕಾಯ್ದಿರಿಸಿರುವ ೧೫೦ ಎಕರೆ ಪ್ರದೇಶದಲ್ಲಿ ಇದೇ ವರ್ಷದಲ್ಲಿ ಚಿತ್ರನಗರಿ ಸ್ಥಾಪನೆ ಮಾಡುವುದಾಗಿ ಘೋಷಿಸಿದರು.