Thursday, January 30, 2025
Menu

ಗೃಹಸಚಿವರ ತವರಲ್ಲಿ ಮಹಿಳೆ ಜೊತೆ ಡಿವೈಎಸ್​​ಪಿ ಅಸಭ್ಯ ವರ್ತನೆ

ದೂರು ನೀಡಲು ಬಂದ ಮಹಿಳೆಯ ಜೊತೆ ಮಧುಗಿರಿ ಉಪವಿಭಾಗದ ಡಿವೈಎಸ್​​ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.

ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್​ ತವರು ಜಿಲ್ಲೆಯ ಡಿವೈಎಸ್​​ಪಿ ರಾಮಚಂದ್ರಪ್ಪ ಅವರ ಅಸಭ್ಯ ವರ್ತನೆಯ ವಿಡಿಯೋ ವೈರಲ್​ ಆಗಿದೆ. ಈ ಘಟನೆ ಪೊಲೀಸ್​ ಇಲಾಖೆ ತಲೆ ತಗ್ಗಿಸುವಂತೆ ಮಾಡಿದೆ.

ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಮಹಿಳೆ ಪಾವಗಡದಿಂದ ಡಿವೈಎಸ್ಪಿ ಕಚೇರಿಗೆ ಬಂದಿದ್ದರು. ಮಹಿಳೆಯನ್ನು ಏಕಾಂತ ಕೊಠಡಿಗೆ ಕರೆದುಕೊಂಡು ಹೋದ ಡಿವೈಎಸ್​ಪಿ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ.

ಡಿವೈಎಸ್ಪಿ ಕಚೇರಿಗೆ ಮಹಿಳೆಯ ಜೊತೆ ಆಗಮಿಸಿದ್ದ ವ್ಯಕ್ತಿ ಎಂಬಾತ ವಿಡಿಯೋ ಸೆರೆ ಹಿಡಿದಿದ್ದಾರೆ ಎಂದು ಶಂಕಿಸಲಾಗಿದೆ. ಬಳಿಕ ವಾಟ್ಸ್‌ಅಪ್ ಮೂಲಕ ವಿಡಿಯೋ ವೈರಲ್ ಮಾಡಿದ್ದಾರೆ ಎನ್ನಲಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಡಿವೈಎಸ್ಪಿ ರಾಮಚಂದ್ರಪ್ಪ ತಲೆಮರೆಸಿಕೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *