ರೋಹಿತ್ ಶರ್ಮ ಸಾರಥ್ಯದ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಚಾಂಪಿಯನ್ಸ್ ಆಗಿ ಹೊರಹೊಮ್ಮುವ ಮೂಲಕ ಇತಿಹಾಸ ಬರೆದಿದೆ.
ದುಬೈನಲ್ಲಿ ಭಾನುವಾರ ನಡೆದ ಫೈನಲ್ ನಲ್ಲಿ ಭಾರತ ತಂಡ 4 ವಿಕೆಟ್ ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಅಜೇಯರಾಗಿ ಚಾಂಪಿಯನ್ಸ್ ಟ್ರೋಫಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಮೂಲಕ ಭಾರತ 12 ವರ್ಷಗಳ ನಂತರ ಮೊದಲ ಬಾರಿ ಹಾಗೂ ಮೂರನೇ ಬಾರಿ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದೆ.
2013ರಲ್ಲಿ ಮಹೇಂದ್ರ ಸಿಂಗ್ ಧೋನಿ ಸಾರಥ್ಯದಲ್ಲಿ ಭಾರತ ತಂಡ ಗೆದ್ದ ನಂತರ ಇದೇ ಮೊದಲ ಬಾರಿಗೆ ಭಾರತ ಚಾಂಪಿಯನ್ಸ್ ಟ್ರೋಫಿ ಗೆದ್ದಿದೆ. ವಿಶೇಷ ಅಂದರೆ ರೋಹಿತ್ ಶರ್ಮ ಸಾರಥ್ಯದಲ್ಲಿ ಭಾರತ ತಂಡ ಗೆದ್ದ 2ನೇ ಐಸಿಸಿ ಟ್ರೋಫಿ ಆಗಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡವನ್ನು 50 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 251 ರನ್ ಗಳಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಭಾರತ ತಂಡ 1 ಓವರ್ ಬಾಕಿ ಇರುವಂತೆಯೇ 6 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.