Menu

ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪ್‌ ಮಾರಾಟ ನಿಷೇಧ

ನದಿಗಳು ಮತ್ತು ಜಲಮೂಲಗಳ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ  ರಾಜ್ಯದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಸೋಪ್, ಶಾಂಪು ಬಳಕೆ ಹೆಚ್ಚಾಗಿದ್ದು ಪರಿಸರ ಮಾಲಿನ್ಯಕ್ಕೆ ಕಾರಣ ವಾಗುತ್ತಿದೆ. ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಆದೇಶ ಹೊರಡಿಸಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಇಲಾಖೆ ತಿಳಿಸಿದೆ. ‌

ನದಿ ದಡಗಳಲ್ಲಿ‌ ಸೋಪ್, ಶಾಂಪು‌ ಮಾರಾಟ ಹಾಗೂ ಬಳಕೆ ಮಾಡಬಾರದು, ಭಕ್ತರು ತಮ್ಮ ವಸ್ತುಗಳನ್ನು ನದಿಗಳಲ್ಲಿ ವಿಸರ್ಜನೆ ಮಾಡಬಾರದು ಎಂದು ಸಚಿವ ಈಶ್ವರ್ ಖಂಡ್ರೆ ಈ ಆದೇಶ ಹೊರಡಿಸಿದ್ದಾರೆ.

ಪುಣ್ಯ ಕ್ಷೇತ್ರಗಳ ನದಿ ತೀರ, ಕಲ್ಯಾಣಿ ಹಾಗೂ ಸ್ನಾನಘಟ್ಟಗಳಲ್ಲಿ ಭಕ್ತರು ಶ್ಯಾಂಪು, ಸೋಪ್ ಬಳಸಿ ಸ್ನಾನ ಮಾಡಿ, ಉಳಿದ ಸೋಪಿನ ತುಂಡು ಮತ್ತು ಶ್ಯಾಂಪು ಪ್ಯಾಕೇಟ್​ಗಳನ್ನು ಅಲ್ಲಿಯೇ ಬಿಟ್ಟು ಹೋಗುತ್ತಿರುವುದರಿಂದ ಅವೆಲ್ಲ ಜಲಮೂಲ ಸೇರಿ ನದಿ, ಕೊಳ, ಸರೋವರಗಳಲ್ಲಿ ನೊರೆ ಉಕ್ಕುವ ಜೊತೆಗೆ ನೀರು ಕಲುಷಿತ ವಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನದಿಗಳ ನೀರಿನ ಶುದ್ಧತೆ ಕಾಪಾಡುವುದು ಎಲ್ಲರ ಜವಾಬ್ದಾರಿ, ಪುಣ್ಯ ಕ್ಷೇತ್ರಗಳ ನದಿ, ಸರೋವರ, ಕೆರೆ, ಕಲ್ಯಾಣಿಗಳ 500 ಮೀಟರ್ ವ್ಯಾಪ್ತಿಯಲ್ಲಿ ಸೋಪ್, ಶ್ಯಾಂಪೂ ಮಾರಾಟ ಮಾಡದಂತೆ ಹಾಗೂ ನದಿ, ಕಲ್ಯಾಣಿ, ಸರೋರಗಳಲ್ಲಿ ಭಕ್ತರು ತಮ್ಮ ವಸ್ತ್ರಗಳನ್ನು ವಿಸರ್ಜನೆ ಮಾಡದಂತೆ ನಿರ್ಬಂಧಿಸಲು ಸೂಕ್ತ ಕ್ರಮ ವಹಿಸುವಂತೆ ಈ ಮೂಲಕ ಸೂಚಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Related Posts

Leave a Reply

Your email address will not be published. Required fields are marked *