Menu

ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕ ಸೊಗಸು ಬಹುಮಾನಕ್ಕೆ ಅರ್ಜಿ ಆಹ್ವಾನ

kannada pustka pradikara

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಪ್ರಕಾಶಕರು /ಮುದ್ರಕರು/ ಕಲಾವಿದರು / ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ / ದೂರವಾಣಿ ಸಂಖ್ಯೆ – ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಕಳುಹಿಸಿಕೊಡಬೇಕಾಗಿ ವಿನಂತಿ.

ದಿನಾಂಕ:29.03.2025ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 – ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಹಾಗೂ ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ: ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು -560002 – ವೆಬ್ಸೈಟ್ https://kpp.karnataka.gov.in, ದೂರವಾಣಿ ಸಂಖ್ಯೆ: 080-22484516 / 22107704 – ಇಲ್ಲಿ ಸಂಪರ್ಕಿಸಬಹುದಾಗಿದೆ.

Related Posts

Leave a Reply

Your email address will not be published. Required fields are marked *