Wednesday, September 23, 2026
Menu

ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ ಅಂದಿದ್ದೇಕೆ ಹೆಚ್‌ಡಿಕೆ

ಹೋಳು ಮಾಡವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ, 75 ವರ್ಷದಿಂದ ಇದನ್ನೇ ಮಾಡಿದೆ, ಮುಂದುವರಿಸಿದೆ. ಕಾಂಗ್ರೆಸ್ ನೀತಿಯೇ ಒಡೆದಾಳುವುದು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಅಂದು ಅಖಂಡ ಭಾರತವನ್ನು ಹೋಳು ಮಾಡಿತು, ಇಂದು ಬೆಂಗಳೂರು ಮಹಾನಗರವನ್ನು ಹೋಳು ಮಾಡುತ್ತಿದೆ. ಲೂಟಿಕೋರರಾದ ಮಹಮ್ಮದ್ ಘಜ್ನಿ, ಮೊಹಮದ್‌ ಘೋರಿ ಸಂಪದ್ಭರಿತ ಭಾರತವನ್ನು ಲೂಟಿಗೈದರು. ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ. ಲೂಟಿಗೆ 7 ದಾರಿ ಹುಡುಕುತ್ತಿ ದ್ದಾನೆ ಎಂದು ಗ್ರೇಟರ್‌ ಬೆಂಗಳೂರು ಆಡಳಿತ ೨೦೨೪ ವಿಧೇಯಕದ ಬಗ್ಗೆ ಪ್ರತಿಕ್ರಿಯಿಸಿ ಸಾಮಾಜಿಕ ಮಾಧ್ಯಮ ಎಕ್ಸ್‌ ಖಾತೆ ಮೂಲಕ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ನಾಡಪ್ರಭು ಕೆಂಪೇಗೌಡರ ಪರಂಪರೆಯನ್ನು ಬೇರುಸಹಿತ ಹಾಳು ಮಾಡುವುದು. ಗ್ರೇಟರ್‌ ಬೆಂಗಳೂರು ಹೆಸರಿಗಷ್ಟೇ. ಲೂಟರ್‌ ಉದ್ದೇಶ ಕೊಳ್ಳೆ ಹೊಡೆಯುವು ದಷ್ಟೇ. ಅಧಿಕಾರ, ಅಭಿವೃದ್ಧಿ ವಿಕೇಂದ್ರೀಕರಣವಲ್ಲ, ಇದು ಲೂಟಿಯ ವಿಕೇಂದ್ರೀಕರಣ ಎಂದು ಹೆಚ್‌ಡಿಕೆ ಟಾಂಗ್‌ ಕೊಟ್ಟಿದ್ದಾರೆ.

Related Posts

Leave a Reply

Your email address will not be published. Required fields are marked *