Menu

5 ವರ್ಷ ಪೂರ್ಣಾವಧಿ ಸಿಎಂ ಆಗಿ ನಾನೇ ಇರುತ್ತೇನೆ: ಸಿದ್ದರಾಮಯ್ಯ

cm siddaramaiah

5 ವರ್ಷಗಳ ನಾನೇ ಸಿಎಂ ಆಗಿ ನಾನೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ವಿಧಾನಸಭೆ ಅಧಿವೇಶನದದಲ್ಲಿ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಪ್ರಶ್ನೆಗೆ ಸಿದ್ದರಾಮಯ್ಯ ಈ ರೀತಿ ಉತ್ತರಿಸಿದರು.

ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ನೀವು ಮತ್ತೆ ಅಧಿಕಾರಕ್ಕೆ ಬರುತ್ತಿರಾ? ಹಿಂದೆ ನಾವೇ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದ್ದೀರಿ. ಆದರೆ ಬಿಜೆಪಿ ಅಧಿಕಾರಕ್ಕೆ ಬಂದಿತ್ತು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಲೇವಡಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈ ಬಾರಿ ನಾವು ೫ ವರ್ಷ ಆಡಳಿತ ಪೂರ್ಣಗೊಳಿಸುತ್ತೇವೆ. ಮುಂದೆಯೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.

ಈ ವೇಳೆ ಪ್ರತಿಪಕ್ಷ ಸದಸ್ಯರು ನೀವು ಮುಖ್ಯಮಂತ್ರಿ ಆಗಿ ಇರುತ್ತೀರಾ ಎಂದು ಮರು ಪ್ರಶ್ನಿಸಿದರು. ಹೌದು, ನಾನು ೫ ವರ್ಷಗಳ ಕಾಲ ಪೂರ್ಣಾವಧಿ ಮುಖ್ಯಮಂತ್ರಿ ಆಗಿ ಇರುತ್ತೇನೆ ಎಂದು ಉತ್ತರಿಸಿದರು.

Related Posts

Leave a Reply

Your email address will not be published. Required fields are marked *