Tuesday, February 03, 2026
Menu

ಬೆಂಗಳೂರಿನಲ್ಲಿ ಬಾಸ್ಕೆಟ್‌ ಬಾಲ್‌ ಕೋಚ್‌ ಆತ್ಮಹತ್ಯೆ

ಬೆಂಗಳೂರು ಪೋತ್ಲಪ್ಪ ಗಾರ್ಡನ್‌ನ ಮನೆಯಲ್ಲಿ ಬಾಸ್ಕೆಟ್‌ ಬಾಲ್‌ ಕೋಚ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋನಿಯಾ (26) ಆತ್ಮಹತ್ಯೆ ಮಾಡಿಕೊಂಡ ಬಾಸ್ಕೆಟ್‌ ಬಾಲ್‌ ಕೋಚ್‌.

ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ಸಾವಿನ ಬಗ್ಗೆ ಅನುಮಾನಗಳು ಮೂಡಿದ್ದು, ಆಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸೋನಿಯಾ ಕಳೆದ ಏಳೆಂಟು ವರ್ಷಗಳಿಂದ ಬಾಸ್ಕೆಟ್ ಬಾಲ್ ಕ್ರೀಡೆಯಲ್ಲಿ ಗುರುತಿಸಿಕೊಂಡಿದ್ದರು. ರಾಜ್ಯ, ರಾಷ್ಟ್ರಮಟ್ಟದಲ್ಲಿ ಟೂರ್ನಿಗಳಲ್ಲಿ ಭಾಗಿಯಾಗಿದ್ದರು. ಮುಂದಿನ ತಿಂಗಳು ದುಬೈನಲ್ಲಿ ಟೂರ್ನಿಯಲ್ಲಿ ಆಡಬೇಕಿತ್ತು.

ಸ್ನಾನ ಮಾಡುವಾಗ ಬಾತ್‌ರೂಮ್‌ನಲ್ಲಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಅಸು ನೀಗಿರುವುದಾಗಿ ಕುಟುಂಬಸ್ಥರು ಹೇಳುತ್ತಿದ್ದಾರೆ.

 

Related Posts

Leave a Reply

Your email address will not be published. Required fields are marked *