Menu
12

ಅನಧಿಕೃತ ಮರಳು ಸಾಗಾಟ: 7629 ಎಫ್ಐಆರ್ ದಾಖಲು 40 ಕೋಟಿ ದಂಡ

ss mallikarjun

ಬೆಂಗಳೂರು:ಅನಧಿಕೃತವಾಗಿ ಮರಳು ಸಾಗಾಣಿಕೆ ತಡೆಯಲು ಕಾರ್ಯಪ್ರವೃತ್ತರಾಗಿದ್ದು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಟಾಸ್ಕ್ ಪೋರ್ಸ್ ಮರಳು ಸಮಿತಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು ಕಳೆದ ಐದು ವರ್ಷಗಳಲ್ಲಿ 47 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದರು.

ವಿಧಾನಪರಿಷತ್ ನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಡಾ.ಧನಂಜಯ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು,ಅಕ್ರಮ ಮರಳು ಸಾಗಾಟ ಮಾಡಿದವರ ವಿರುದ್ಧ 23,572 ಪ್ರಕರಣಗಳನ್ನ ಪತ್ತೆ ಹಚ್ಚಿ 7629 ಎಫ್ಐಆರ್ ದಾಖಲಿಸಲಾಗಿದೆ. ಕಾನೂನುಬಾಹಿರವಾಗಿ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದವರಿಂದ 47 ಕೋಟಿ ಸಂಗ್ತಹಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 260 ಮರಳು ಬ್ಲಾಕ್ ಗಳು ಹಾಗೂ 879 ಎಂ-ಸ್ಟಾಂಡ್ ಬ್ಲಾಕ್ ಗಳಿವೆ. 2023-24ನೇ ಸಾಲಿನಲ್ಲಿ 24,10,236 ಮೆಟ್ರಿನ್ ಟನ್ ಮರಳಿನಿಂದ 35,68 ಕೋಟಿ ರಾಜಧನ ಸಂಗ್ರಹಿಸಲಾಗಿದೆ ಎಂದು ಹೇಳಿದರು.

ಅನಧಿಕೃತ ಮರಳು ಹಾಗೂ ಇತರೆ ಉಪಖನಿಜ ಗಣಿಗಾರಿಕೆ ನಿಯಂತ್ರಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಟಾಸ್ಕ್ ಪೋರ್ಸ್ ಮರಳು ಸಮಿತಿ ರಚಿಸಲಾಗಿದೆ. ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ತನಿಖಾ ಠಾಣೆ ಹಾಗೂ ಚಾಲಿತದಳ ತಂಡ ರಚಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ ಎಂದರು.

ಅನಧಿಕೃತ ಮರಳು ಹಾಗೂ ಇತರೆ ಉಪಖನಿಜ ಗಣಿಗಾರಿಕೆ ನಿಯಂತ್ರಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಟಾಸ್ಕ್ ಪೋರ್ಸ್ ಮರಳು ಸಮಿತಿ ರಚಿಸಲಾಗಿದೆ. ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ತನಿಖಾ ಠಾಣೆ ಹಾಗೂ ಚಾಲಿತದಳ ತಂಡ ರಚಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ ಎಂದರು.

ಕಟ್ಟಡ ನಿರ್ಮಾಣ ಮಾಡುವವರು ಮತ್ತಿತರರಿಗೆ ತೊಂದರೆಯಾಗದಂತೆ ಜಿಲ್ಲಾ ಸಮಿತಿಗಳ ಮೂಲಕ ಮರಳುಗಾರಿಕೆಯನ್ನು ಪೂರೈಕೆ ಮಾಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ, ಜಿಲ್ಲಾ ಸಮಿತಿಗಳ ಮೂಲಕ ಮರಳನ್ನು ಅಗತ್ಯ ಇರುವವರಿಗೆ ಪೂರೈಕೆ ಮಾಡಲು ಸೂಚನೆ ಕೊಡಲಾಗಿದೆ. ಕೆಲವು ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದರೆ ಸಮಸ್ಯೆಯನ್ನು ಇತ್ಯರ್ಥಪಡಿಸುವ ಆಶ್ವಾಸನೆ ನೀಡಿದರು,ಜಿಲ್ಲಾಡಳಿತಕ್ಕೆ ಕೆಡಿಸಿ ಮೀಟಿಂಗ್ ಮೂಲಕ ಮರಳನ್ನು ಸಮರ್ಪಕವಾಗಿ ಪೂರೈಕೆ ಮಾಡಲು ಹೆಚ್ಚಿನ ಅವಕಾಶ ಕೊಡಲಾಗಿದೆ. ಎಲ್ಲಿಯೂ ಕೊರತೆ ಉಂಟಾಗದಂತೆ ಕ್ರಮ ತೆಗೆದುಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.

ಇದಕ್ಕೂ ಮುನ್ನ ಮಾತನಾಡಿದ ಸದಸ್ಯ ಐವಾನ್ ಡಿಸೋಜ ಅವರು, ಕರಾವಳಿಯಲ್ಲಿ ನೂರಾರು ಎಕರೆ ಮರಳುಗಾರಿಕೆಯಿಂದ ಜಮೀನು ನಾಶವಾಗುತ್ತಿದೆ. ಸೌಂಪ್ರದಾಯಿಕ ಮರಳುಗಾರಿಕೆಗೆ ಸಿರ್ಜೆಡ್ ವ್ಯಾಪ್ತಿಯಲ್ಲಿ ನಿಷೇಧವಿದೆ. ಆದರೂ ಕೂಡ ನಿಷೇಧಿತ ಪ್ರದೇಶದಲ್ಲಿ ಮರಳುಗಾರಿಕೆ ನಡೆಯುತ್ತಿದೆ ಎಂದರು. ಮರಳುಗಾರಿಕೆಗೆ ಸಿಆರ್ಜೆಡ್ ವ್ಯಾಪ್ತಿಯಲ್ಲಿ ಅವಕಾಶ ನೀಡಬೇಕಾಗುತ್ತದೆ. ಕರಾವಳಿಗೆ ಪ್ರತ್ಯೇಕ ಮರಳು ನೀತಿ ರೂಪಿಸಿ ಎಂದು ಐವಾನ್ ಡಿಸೋಜ ಆಗ್ರಹಿಸಿದರು

Related Posts

Leave a Reply

Your email address will not be published. Required fields are marked *