ಚಾಮರಾಜನಗರ ತಾಲೂಕಿನ ಪುಣಜನೂರು ಚೆಕ್‌ಪೋಸ್ಟ್ ಬಳಿ ಶನಿವಾರ ರಾತ್ರಿ ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ನಂದನ್ ಹಾಗೂ ಜೀವನ್ ಎಂದು ಗುರುತಿಸಲಾಗಿದೆ. ಸುನೀಲ್, ಧನುಷ್ ಮತ್ತು ಶಶಾಂಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಚೆಕ್‌ಪೋಸ್ಟ್ ಸಮೀಪ ಕಾರು ಮರಕ್ಕೆ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಕಾರಿನಲ್ಲಿದ್ದ ಎಲ್ಲರೂ ವಿದ್ಯಾರ್ಥಿಗಳಾಗಿದ್ದು, ಮದುವೆಗೆ ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಚಾಮರಾಜನಗರ ಪೂರ್ವ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಕ್ರಮ ಕೈಗೊಂಡಿದ್ದಾರೆ.