Menu

ಠಾಣೆಯಲ್ಲೇ ಜೂಜಾಡಿದ ಕಲಬುರಗಿಯ ಐವರು ಪೊಲೀಸರ ಅಮಾನತು

ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣೆಯಲ್ಲಿ ಜೂಜಾಟ ಆಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಿ ಎಸ್‌ಪಿ ಅಡ್ಡೂರು ಶ್ರೀನಿವಾಸಲು ಆದೇಶ ಹೊರಡಿಸಿದ್ದಾರೆ.

ಪೊಲೀಸ್‌ ಠಾಣೆಯೊಳಗೆ ಜೂಜಾಟದಲ್ಲಿ ತೊಡಗಿದ್ದ ಎಎಸ್‌ಐ ಮಹಿಮೂದ್ ಮಿಯಾ, ಹೆಡ್‌ ಕಾನ್ಸ್‌ಟೇಬಲ್‌ಗಳಾದ ನಾಗರಾಜ್, ಸಾಯಿಬಣ್ಣಾ, ಇಮಾಮ್, ಕಾನ್ಸ್‌ಟೇಬಲ್ ನಾಗಭೂಷಣ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿರುವುದಾಗಿ ಎಸ್‌ಪಿ ಅಡ್ಡೂರು ಶ್ರೀನಿವಾಸಲು ಆದೇಶದಲ್ಲಿ ತಿಳಿಸಿದ್ದಾರೆ.

ವಾಡಿ ಠಾಣೆಯ ಪಿಎಸ್‌ಐ ತಿರುಮಲೇಶ್ ಅವರಿಗೂ ನೋಟಿಸ್ ಜಾರಿ ಮಾಡಿ ಕಾರಣ ನೀಡುವಂತೆ ಎಸ್‌ಪಿ ಕೇಳಿದ್ದಾರೆ. ಜೂಜಿನಂಥ ಕಾನೂನುಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕಬೇಕಿರುವ ಪೊಲೀಸರು ಠಾಣೆಯೊಳಗೆ ಜೂಜಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ.

Related Posts

Leave a Reply

Your email address will not be published. Required fields are marked *