Menu

ಬೆಂಗಳೂರಿನಲ್ಲಿ ಕಾವೇರಿ ಆರತಿ ಪ್ರಶ್ನಿಸಿ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ

ಬೆಂಗಳೂರು ನಗರದ ಸ್ಯಾಂಕಿ ಟ್ಯಾಂಕ್​ನ ಬಫರ್ ಝೋನ್​ನಲ್ಲಿ ರಾಜ್ಯ ಸರ್ಕಾರ ಮಾರ್ಚ್ 21ರಂದು ಹಮ್ಮಿಕೊಂಡಿರುವ ಕಾವೇರಿ ಆರತಿ ಕಾರ್ಯಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಕೆಯಾಗಿದೆ.

ಕಾವೇರಿ ಆರತಿ ಸಂಬಂಧ ಬೆಂಗಳೂರು ಜಲ ಮಂಡಳಿಯ ಅಧಿಕಾರಿಗಳು ಸಿದ್ದತೆಗಳನ್ನು ಮಾಡಿಕೊಳ್ಳುತ್ತಿರುವ ಸಂಬಂಧ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಸಂಬಂಧ ಅರ್ಜಿಯನ್ನು ಶೀಘ್ರ ವಿಚಾರಣೆಗೆ ಪರಿಗಣಿಸಬೇಕು ಎಂದು ಮುಖ್ಯನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರಿದ್ದ ನ್ಯಾಯಪೀಠಕ್ಕೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದ್ದಾರೆ.

ಬೆಂಗಳೂರು ನಗರದ ಕೆರೆಗಳ ಸಂರಕ್ಷಣೆ ಮತ್ತು ಕುರಿತಂತೆ ಗೀತಾ ಮಿಶ್ರಾ ಎಂಬವರು 2019ರಲ್ಲಿ ಸಲ್ಲಿಸಿರುವ ಅರ್ಜಿಯೊಂದಿಗೆ ಈ ಮನವಿಯನ್ನು ವಿಚಾರಣೆ ನಡೆಸಬೇಕು ಎಂದು ವಕೀಲ ಜಿ.ಆರ್‌.ಮೋಹನ್‌ ಪ್ರಸ್ತಾಪಿಸಿದ್ದಾರೆ.

ಕಾವೇರಿ ಆರತಿ ಹಮ್ಮಿಕೊಳ್ಳುವುದಕ್ಕೆ ಅರ್ಜಿದಾರರಿಂದ ಯಾವುದೇ ಆಕ್ಷೇಪಣೆ ಇಲ್ಲ. ಆದರೆ ಈ ಕಾಯಕ್ರಮಕ್ಕೆ ಕೆರೆಯ ಬಫರ್‌ ಝೋನ್​ನಲ್ಲಿ ಕಾನೂನುಬಾಹಿರ ವಾಗಿ ತಾತ್ಕಾಲಿಕ ಸ್ಟೇಜ್​​ಗಳು ನಿರ್ಮಾಣವಾಗಲಿವೆ, ಇದಕ್ಕೆ ನಮ್ಮ ಆಕ್ಷೇಪಣೆ ಇದೆ’ ಎಂದು ವಿಚಾರಣೆ ವೇಳೆ ವಕೀಲರು ಪೀಠಕ್ಕೆ ತಿಳಿಸಿದರು. ಸ್ಯಾಂಕಿ ಕೆರೆಯ ಬಫರ್‌ ಝೋನ್​ನಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ನಡೆಸುವುದು ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಕಾಯಿದೆಗೆ ತದ್ವಿರುದ್ದ. ಈ ರೀತಿಯಲ್ಲಿ ಸಾಂಸ್ಕೃತಿಕ ಕಾಯಕ್ರಮ ಹಮ್ಮಿಕೊಳ್ಳುವುದರಿಂದ ಕೆರೆಯಲ್ಲಿನ ಹಕ್ಕಿಗಳಿಗೆ ತೀವ್ರ ತೊಂದರೆಯಾಗುತ್ತದೆ ಎಂದು ಪೀಠಕ್ಕೆ ವಿವರಿಸಿದರು.

Related Posts

Leave a Reply

Your email address will not be published. Required fields are marked *