ಅಂಕೋಲಾ: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಚತುಷ್ಪತ ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿದ್ದ ಐಆರ್‌ಬಿ ಕಂಪನಿಯ 8 ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ನ್ಯಾಯಾಲಯದ ಆದೇಶ ಹೊರಡಿಸಿ 24 ದಿನ ಕಳೆದರು ನ್ಯಾಯಾಲಯದ ಆದೇಶಕ್ಕೆ ಮಾನ್ಯತೆ ಕೊಡದ ಪೊಲೀಸ ಅಧಿಕಾರಿಗಳ ವಿರುದ್ಧ ಪ್ರಣವಾನಂದ ಸ್ವಾಮೀಜಿಯವರು ಮಂಗಳವಾರ ಅಂಕೋಲಾ ಪೊಲೀಸ ಠಾಣೆ ಎದುರು ಆಕ್ರೋಶ ವ್ಯಕ್ತಪಡಿಸಿದರು.
ಐಆರ್‌ಬಿ ಕಂಪನಿಯ ಎಂಟು ಅಧಿಕಾರಿಗಳ ಮೇಲೆ ಎಫ್‌ಐಆರ್ ದಾಖಲಿಸುವಂತೆ ಅಂಕೋಲಾ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿತ್ತು, ಆದೇಶ ಹೊರಡಿಸಿ 24 ದಿನ ಕಳೆದರು ಕ್ರಮ ಕೈಗೊಳ್ಳದ ಪೊಲೀಸ ಅಧಿಕಾರಿಗಳ ನಡೆಯನ್ನು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು.
ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ದೊರೆತಿಲ್ಲ, ಅವೈಜ್ಞಾನಿಕ ಕಾಮಗಾರಿ ಕೈಗೊಂಡು ಗುಡ್ಡ ಕುಸಿತಕ್ಕೆ ಕಾರಣವಾಗಿದ್ದ ಐಆರ್‌ಬಿ ಕಂಪನಿಯವರು ನಿರಾತಂಕವಾಗಿ ಇದ್ದಾರೆ, ಅಂತವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಯ ಮೆಟ್ಟಿಲೇರಿದರು ಅವರು ಸ್ಪಂದಿಸಿಲ್ಲ, ಆದ್ದರಿಂದ ನ್ಯಾಯಾಲಯದ ಮೊರೆ ಹೋದೆವು. ಅಲ್ಲಿ ಐಆರ್‌ಬಿ ಕಂಪನಿಯ ಎಂಟು ಅಧಿಕಾರಿಗಳ ಮೇಲೆ ಎಫ್‌ಐಆರ್ ದಾಖಲಿಸುವಂತೆ ಆದೇಶ ನೀಡಿದ್ದರು ಸಹ ಯಾವುದೇ ಪೊಲೀಸರು ಕ್ರಮ ಕೈಗೊಳ್ಳಲಿಲ್ಲ, ಇದಕ್ಕೆ ಸ್ವತಃ ಬಂದು ವಿಚಾರಿಸಿದಾಗ ನ್ಯಾಯಾಲಯ ನಮಗೆ ಮತ್ತೊಮ್ಮೆ ಜ್ಞಾಪಿಸಬೇಕು ಎಂದು ಉಡಾಫೆ ಉತ್ತರ ನೀಡುತ್ತಾರೆ, ನ್ಯಾಯಾಲಯದ ಆದೇಶ ಉಲ್ಲಂಘಿಸಿ ನಿರ್ಲಕ್ಷ್ಯತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮವಾಗಬೇಕು.
ಹಿಂದುಳಿದ ವರ್ಗದ ಮುಖ್ಯಮಂತ್ರಿ ಎನಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಹಾಗೂ ಗೃಹಮಂತ್ರಿ ಜಿ. ಪರಮೇಶ್ವರ ಅವರೇ ಯಾಕೆ ಸುಮ್ಮನಿದ್ದೀರಿ ನಿಮ್ಮಿಂದ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಅಸಾಧ್ಯವೇ ಎಂದು ಗುಡುಗಿದರು.
ಹಿನ್ನೆಲೆ
ಶಿರೂರು ಗುಡ್ಡ ಕುಸಿತಕ್ಕೆ ಐಆರ್‌ಬಿ ಕಂಪನಿಯ ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಕಾರಣ ಎಂದು ಬ್ರಹ್ಮರ್ಷಿ ನಾರಾಯಣ ಗುರು ಶಕ್ತಿ ಪೀಠದ ಪೀಠಾಧಿಪತಿಗಳಾದ ಹಾಗೂ ಈಡಿಗ ಸಮುದಾಯದ ಸ್ವಾಮೀಜಿ ಪ್ರಣವಾನಂದ ಸ್ವಾಮೀಜಿಯವರು ವಿರೋಧ ವ್ಯಕ್ತಪಡಿಸಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪೊಲೀಸರು ಪ್ರಕರಣ ದಾಖಲಿಸದ ಕಾರಣ ಸ್ವಾಮೀಜಿ ನ್ಯಾಯಾಲಯದ ಮೊರೆ ಹೋಗಿದ್ದರು, ಸ್ವಾಮೀಜಿಯವರ ದೂರನ್ನು ಪುರಸ್ಕರಿಸಿದ ಜೆಎಂಎಫ್‌ಸಿ ನ್ಯಾಯಾಲಯ ಕಂಪನಿಯ ಎಂಟು ಜನರ ಮೇಲೆ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಿತ್ತು. ಆದರೆ ಪೊಲೀಸ್ ಇಲಾಕೆ ಇವೆರಗೂ ಐಆರ್‌ಬಿ ಅದಿಕಾರಿಗಳ ವಿರುದ್ದ ಎಫ್‌ಐಆರ್ ದಾಖಲಿಸಿಕೊಂಡಿರಲಿಲ್ಲ.