ಚಾಂಪಿಯನ್ಸ್ ಟ್ರೋಫಿ ವಿಜೇತ ಭಾರತ ತಂಡಕ್ಕೆ ಬಿಸಿಸಿಐ 58 ಕೋಟಿ ರೂ. ಬಹುಮಾನ ಮೊತ್ತ ಘೋಷಿಸಿದೆ. ಇದು ಟೂರ್ನಿಯ ಬಹುಮಾನ ಮೊತ್ತಕ್ಕಿಂತ ಮೂರು ಪಟ್ಟು ಹೆಚ್ಚು!
ಹೌದು, ಇತ್ತೀಚೆಗೆ ಪಾಕಿಸ್ತಾನ ಮತ್ತು ದುಬೈ ಆತಿಥ್ಯದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಸೋಲರಿಯದ ತಂಡವಾಗಿ ಪ್ರಶಸ್ತಿ ಎತ್ತಿ ಹಿಡಿದಿತ್ತು. ರೋಹಿತ್ ಶರ್ಮ ಸಾರಥ್ಯದ ಭಾರತ ತಂಡ ಫೈನಲ್ ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಎರಡು ದಶಕಗಳ ನಂತರ ಪ್ರಶಸ್ತಿ ಗೆದ್ದ ಸಾಧನೆ ಮಾಡಿತ್ತು.
ಭಾರತ ತಂಡ ಆಟಗಾರರು, ಸಹಾಯಕ ಸಿಬ್ಬಂದಿ, ಕೋಚ್ ಸೇರಿದಂತೆ ಎಲ್ಲರಿಗೂ ಒಳಗೊಂಡಂತೆ ೫೮ ಕೋಟಿ ರೂ. ಬಹುಮಾನ ಮೊತ್ತವನ್ನು ಬಿಸಿಸಿಐ ಘೋಷಿಸಿದೆ ಎಂದು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ತಿಳಿಸಿದ್ದಾರೆ.
ಜಾಗತಿಕ ಮಟ್ಟದಲ್ಲಿ ಅದರಲ್ಲೂ ಐಸಿಸಿ ಟೂರ್ನಿಯಲ್ಲಿ ಒಂದರ ಹಿಂದೆ ಒಂದರಂತೆ ಪ್ರಶಸ್ತಿ ಗೆಲ್ಲುವುದು ಸುಲಭ ಸಾಧನೆಯಲ್ಲ. ಇದಕ್ಕಾಗಿ ಆಟಗಾರರು ಮತ್ತು ಕೋಚ್ ಹಾಗೂ ಸಹಾಯಕ ಸಿಬ್ಬಂದಿಯ ಬದ್ಧತೆ ಹಾಗೂ ಕಾರ್ಯಕ್ಷಮತೆಗೆ ಸಾಕ್ಷಿ ಎಂದು ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ತಿಳಿಸಿದ್ದಾರೆ.