Menu

ಛತ್ತೀಸ್‌ಗಢದಲ್ಲಿ 30 ನಕ್ಸಲರ ಹೊಡೆದುರುಳಿಸಿದ ಭದ್ರತಾಪಡೆ

ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧ ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ 30 ನಕ್ಸಲರು ಮೃತಪಟ್ಟಿದ್ದಾರೆ. ಇದೇ ವೇಳೆ ಒಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ಬಿಜಾಪುರ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್‌ನಲ್ಲಿ 26 ನಕ್ಸಲರು ಪ್ರಾಣ ಕಳೆದುಕೊಂಡಿದ್ದು, ಕಂಕೇರ್‌ ವಲಯದಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ 4 ನಕ್ಸಲರು ಹತರಾಗಿದ್ದಾರೆ ಎಂದು ಭದ್ರತಾ ಪಡೆಗಳು ಮಾಹಿತಿ ನೀಡಿವೆ. ಬಿಜಾಪುರ ಎನ್‌ಕೌಂಟರ್‌ ವೇಳೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪ್ರತಿಕ್ರಿಯಿಸಿ, ದೇಶವನ್ನು ನಕ್ಸಲ್‌ಮುಕ್ತ ಭಾರತ ಅಭಿಯಾನ ಸಾಕಾರಗೊಳಿಸುವಲ್ಲಿ ನಮ್ಮ ಭದ್ರತಾ ಪಡೆಗಳು ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿವೆ. ಛತ್ತೀಸ್‌ಗಢದಲ್ಲಿ ಭದ್ರತಾಪಡೆಗಳು 22 ನಕ್ಸಲರನ್ನು ಹೊಡೆದುರುಳಿಸಿವೆ. ಅನೇಕ ಸೌಲಭ್ಯಗಳನ್ನು ಘೋಷಿಸಿದ ಹೊರತಾಗಿಯೂ ಶರಣಾಗದ ಈ ಬಂಡು ಕೋರರ ವಿರುದ್ಧ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಶೂನ್ಯ ಸಹಿಷ್ಣು ನೀತಿಯನ್ನು ಅನುಸರಿಸುತ್ತಿದೆ. ನಿರ್ದಾ ಕ್ಷಿಣ್ಯವಾಗಿ ಅವರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಈ ವರ್ಷದ ಮಾ.31ರೊಳಗೆ ದೇಶ ನಕ್ಸಲ್‌ ಮುತ್ತ ಆಗಲಿದೆ ಎಂದು ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *