ಹಾಸನ ತಾಲೂಕಿನ ಹಾಲುವಾಗಿಲು ಗ್ರಾಮದಲ್ಲಿ ಫೋಟೋಶೂಟ್ ಮಾಡುತ್ತಿದ್ದ ವೇಳೆ ಯುವಕನೊಬ್ಬ ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ನಾಗೇಂದ್ರ (19) ಮೃತ ಯುವಕ.
ಖಾಸಗಿ ಚಿನ್ನಾಭರಣ ಮಳಿಗೆಯಲ್ಲಿ ಪ್ರಮೋಟರ್ ಆಗಿ ಕೆಲಸ ಮಾಡುತ್ತಿದ್ದ ನಾಗೇಂದ್ರ ಹಾಗೂ ಮಂಜುನಾಥ್ ಮುಗಿಸಿ ಹಾಲುವಾಗಿಲು ಬಳಿ ಹರಿಯುವ ನೀರು ನೋಡಲು ತೆರಳಿದ್ದರು. ನಾಗೇಂದ್ರ ಹರಿಯುವ ನೀರಿನಲ್ಲಿ ನಿಂತು ಫೋಟೋ ತೆಗೆಸಿಕೊಳ್ಳುವಾಗ ಕಾಲು ಜಾರಿ ಬಿದ್ದಿದ್ದಾನೆ. ಕೂಡಲೇ ಸ್ನೇಹಿತನ ರಕ್ಷಣೆಗೆ ಮಂಜುನಾಥ್ ಮುಂದಾದರೂ ಉಳಿಸಲು ಸಾಧ್ಯವಾಗಿಲ್ಲ,
ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿ ನಾಗೇಂದ್ರನ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.