ಮೂರು ರಾಜ್ಯಗಳ ಚುನಾವಣೆ ನಂತರ ದೆಹಲಿಗೆ ಮಹಿಳಾ ಸಿಎಂ ಆಗಿ ಆಯ್ಕೆ ಮಾಡಿದ ಬಿಜೆಪಿ ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಮಹಿಳೆಯನ್ನು ನೇಮಕ ಮಾಡಲು ಚಿಂತನೆ ನಡೆದಿದೆ. ಒಂದು ವೇಳೆ ಇದು ಸಾಧ್ಯವಾದರೆ ಬಿಜೆಪಿ ಇತಿಹಾಸದಲ್ಲೇ ಮೊದಲ ಬಾರಿ ರಾಷ್ಟ್ರಾಧ್ಯಕ್ಷೆ ನೇಮಕದ ಮೂಲಕ ಇತಿಹಾಸ ನಿರ್ಮಾಣವಾಗಲಿದೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಅಧಿಕಾರಾವಧಿ ಪೂರ್ಣಗೊಂಡಿದ್ದು, 2019ಕ್ಕೆ ಅವಧಿ ಮುಕ್ತಾಯವಾಗಿದ್ದರೂ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರ ಅವಧಿ ವಿಸ್ತರಣೆ ಮಾಡಲಾಗಿತ್ತು.
ಹೊಸ ಅಧ್ಯಕ್ಷರ ನೇಮಕಕ್ಕೆ ಹುಡುಕಾಟ ನಡೆಸಿದ್ದ ಮುಖಂಡರು ಇದೀಗ ಮಹಿಳಾ ಅಧ್ಯಕ್ಷರನ್ನು ನೇಮಕ ಮಾಡುವ ಬಗ್ಗೆ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ಮಹಿಳಾ ಮೀಸಲು ವಿಧೇಯಕ ಜಾರಿಗೆ ಬಂದರೆ ಚುನಾವಣೆಯಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಾಗಲಿದೆ. ಅಲ್ಲದೇ ಪ್ರತಿಪಕ್ಷ ಕಾಂಗ್ರೆಸ್ ಪಕ್ಷ ಮಹಿಳೆಯರನ್ನು ಕೇಂದ್ರೀಕರಿಸಿ ಗ್ಯಾರಂಟಿ ಯೋಜನೆಗಳನ್ನು ನೀಡಿ ಮತಗಳನ್ನು ಸೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮಹಿಳಾ ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ನೇಮಕ ಮಾಡಲು ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.