ಸಿನಿಮಾಗೆ ಗುಡ್ ಬೈ ಹೇಳಿ ಪಕ್ಷ ಸ್ಥಾಪಿಸುವ ಮೂಲಕ ರಾಜಕೀಯ ಪ್ರವೇಶಿಸಿರುವ ದಳಪತಿ ವಿಜಯ್ ಅಭಿನಯದ ಕೊನೆಯ ಚಿತ್ರ ಜನ ನಾಯಗನ್ ಸಂಕ್ರಾಂತಿಗೆ ಬಿಡುಗಡೆ ಆಗಲಿದೆ.
ಚಿತ್ರರಂಗಕ್ಕೆ ಗುಡ್ ಬೈ ಹೇಳಲಿರುವ ವಿಜಯ್ ನಟಿಸಿರುವ ಕೊನೆಯ ಚಿತ್ರ ‘ಜನ ನಾಯಗನ್’ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ. ಕೆವಿಎನ್ ಪ್ರೊಡಕ್ಷನ್ ನಿರ್ಮಿಸಿರುವ ಭಾರೀ ಬಜೆಟ್ ನ ಈ ಚಿತ್ರ 2026 ಜನವರಿ 15ರಂದು ಬಿಡುಗಡೆ ಆಗಲಿದೆ.
ವಿಜಯ್ ಅಭಿನಯದ 69ನೇ ಚಿತ್ರ ಇದಾಗಿದ್ದು, ಈ ಚಿತ್ರದೊಂದಿಗೆ ಚಿತ್ರರಂಗಕ್ಕೆ ಗುಡ್ ಬೈ ಹೇಳಿ ಪೂರ್ಣ ಪ್ರಮಾಣದ ರಾಜಕಾರಣಿ ಆಗಿ ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ಸಿನಿಮಾ ಚಿತ್ರೀಕರಣ ಬಹುತೇಕ ಮುಕ್ತಾಯಗೊಂಡಿದ್ದು, ಚಿತ್ರ ನಿರೀಕ್ಷೆಗಿಂತಲೂ ಉತ್ತಮವಾಗಿ ಮೂಡಿ ಬರುತ್ತಿದೆ ಎಂದು ಹೇಳಲಾಗಿದೆ.ಈ ಸಿನಿಮಾಗೆ ಬಂಡವಾಳ ಹಾಕಿರುವ ಕೆವಿಎನ್ ಪ್ರೊಡಕ್ಷನ್ಸ್ ಯಾವುದಕ್ಕೂ ಕೊರತೆ ಇಲ್ಲದಂತೆ ಚಿತ್ರ ನಿರ್ಮಾಣ ಮಾಡುತ್ತಿದೆ. ಹೆಚ್.ವಿನೋತ್ ನಿರ್ದೇಶಿಸಿ ಅನಿರುದ್ದ್ ರವಿಚಂದರ್ ಮ್ಯೂಸಿಕ್ ನೀಡಿರುವ ಸಿನಿಮಾ ಮೇಲೆ ಭರವಸೆ ಹೆಚ್ಚಾಗಿದೆ.