ಬೆಂಗಳೂರು: ನಂದಿನಿ ಹಾಲಿನ ದರ ಪ್ರತೀ ಲೀಟರ್ ಗೆ 4 ರೂ. ಹೆಚ್ಚಳ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಅನುಮತಿ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರದಲ್ಲಿ ಪ್ರತೀ ಲೀಟರ್ ಗೆ 4 ರೂ. ಹೆಚ್ಚಳ ಮಾಡುವ ಪ್ರಸ್ತಾಪಕ್ಕೆ ಅನುಮೋದನೆ ನೀಡಿದೆ.
ನೀರಿನ ದರ, ಸಾರಿಗೆ ದರ ಸೇರಿದಂತೆ ವಿವಿಧ ದರಗಳು ಏರಿಕೆ ಮಾಡುತ್ತಿರುವ ರಾಜ್ಯ ಸರ್ಕಾರ ಇದೀಗ ಹಾಲಿನ ದರ ಏರಿಕೆಗೆ ಅನುಮತಿ ನೀಡಿದೆ.
ಕೆಎಂಎಫ್ ಇತ್ತೀಚೆಗಷ್ಟೇ ಹಾಲಿನ ದರ ಪ್ರಸ್ತಾಪಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ ಹಾಲಿನ ದರ ಏರಿಕೆಯ ಮೊತ್ತ ರೈತರಿಗೆ ಸೇರಬೇಕು ಹಾಗೂ ನಿರ್ವಹಣಾ ವೆಚ್ಚದಲ್ಲಿ ಕಡಿತ ಮಾಡಬೇಕು ಎಂದು ಸೂಚಿಸಿದ್ದರು.