Menu

ನಾಳೆ‌‌ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ-ಜಿಟಿ ಕದನ:‌ ಟ್ರಾಫಿಕ್ ಪೊಲೀಸ್‌ ಅಲರ್ಟ್‌

ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟನ್ಸ್ ಅನ್ನು ಎದುರಿಸಲಿದೆ. ಇದಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ಸಿದ್ಧತೆ ಮಾಡಿಕೊಂಡು, ಸ್ಟೇಡಿಯಂ ಸುತ್ತಮುತ್ತ ಟ್ರಾಫಿಕ್‌ ನಿರ್ವಹಣೆಗೆ ಹಲವು ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.

ಬುಧವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆ ವರೆಗೂ ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್, ಪಂದ್ಯ ವೀಕ್ಷಿಸಲು ಬರುವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಂಗಣ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳ ಕೊರತೆಯ ಕಾರಣ ಬಿಎಂಟಿಸಿ,‌ ಮೆಟ್ರೋ ಬಳಸಲು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಓಲಾ, ಉಬರ್, ಆಟೋ ಇತ್ಯಾದಿ ಕ್ಯಾಬ್‌ಗಳು ಪಿಕ್ ಆಪ್ ಮತ್ತು ಡ್ರಾಪ್ ಮಾಡಲು ಸ್ಥಳ ನಿಗದಿಪಡಿಸಲಾಗಿದೆ.

ಎಲ್ಲೆಲ್ಲಿ ವಾಹನಗಳ ನಿಲುಗಡೆ ನಿಷೇಧ?
ಕ್ವೀನ್ಸ್ ರಸ್ತೆಯಲ್ಲಿ ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ.
ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ.
ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ ನೋ ಪಾರ್ಕಿಂಗ್.
ರಾಜಭವನ ರಸ್ತೆಯ ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ ಪಾರ್ಕಿಂಗ್ ಇಲ್ಲ.
ಸೆಂಟ್ರಲ್ ಸ್ಟ್ರಿಟ್ ರಸ್ತೆಯ ಎರಡೂ ಕಡೆ ನೋ ಪಾರ್ಕಿಂಗ್.
ಕಬ್ಬನ್ ರಸ್ತೆಯ ಸಿ.ಟಿ.ಓ. ವೃತ್ತದಿಂದ ಡಿಕೆನ್ಸನ್‌ ರಸ್ತೆ ಜಂಕ್ಷನ್ ರಸ್ತೆಯ ಎರಡೂ ಕಡೆ ವಾಹನ ನಿಲುಗಡೆ ಇಲ್ಲ.
ಸೇಂಟ್ ಮಾರ್ಕ್ಸ್ ರಸ್ತೆ, ಕ್ಯಾಶ್ ಫಾರ್ಮಸಿ ಜಂಕ್ಷನ್​ನಿಂದ ಅನಿಲ್ ಕುಂಬ್ಳೆ ವೃತ್ತದ ವರೆಗೆ ಪಾರ್ಕಿಂಗ್​ ಇಲ್ಲ.
ಮ್ಯೂಸಿಯಂ ರಸ್ತೆ, ಎಂ.ಜಿ ರಸ್ತೆಯಿಂದ ಸೇಂಟ್ ಮಾರ್ಕ್ಸ್ ರಸ್ತೆ, ಆಶೀರ್ವಾದಂ ವೃತ್ತದ ವರೆಗೆ ಪಾರ್ಕಿಂಗ್ ​ಇಲ್ಲ.
ಕಸ್ತೂರಬಾ ರಸ್ತೆ, ಕ್ವೀನ್ಸ್ ವೃತ್ತ- ಹಡ್ಸನ್ ವೃತ್ತ ಹಾಗೂ ಮಲ್ಯ ಆಸ್ಪತ್ರೆ ರಸ್ತೆಯ ಸಿದ್ದಲಿಂಗಯ್ಯ ವೃತ್ತ- ಆರ್ ಆರ್ ಎಂ ಆರ್  ವೃತ್ತದವರೆಗೆ ನೋ ಪಾರ್ಕಿಂಗ್.
ಕಬ್ಬನ್‌ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ ವಾಹನ ನಿಲುಗಡೆ ನಿಷೇಧ.
ಲ್ಯಾವೆಲ್ಲೆ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್‌ ಹಾಗೂ ವಿಠಲ್ ಮಲ್ಯ ರಸ್ತೆಯ ಸಿದ್ದಲಿಂಗಯ್ಯ ವೃತ್ತದಿಂದ ಸೇಂಟ್‌ ಮಾರ್ಕ್ಸ್ ರಸ್ತೆಯ ಬಿಷಪ್‌ಕಾಟನ್ ಶಾಲೆವರೆಗೆ ವಾಹನ ನಿಲುಗಡೆ ನಿಷೇಧ.

ಎಲ್ಲೆಲ್ಲಿ ಪಾರ್ಕಿಂಗ್​ಗೆ ಮಾಡಬಹುದು
ಪಂದ್ಯ ವೀಕ್ಷಣೆ ಮಾಡಲು ಬರುವವರಿಗೆ ಸೆಂಟ್ ಜೋಸೆಫ್ ಹೈಸ್ಕೂಲ್ ಗ್ರೌಂಡ್ ಹಾಗೂ ಯು.ಬಿ.ಸಿಟಿ ನಿಲುಗಡೆ ಸ್ಥಳದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ಪಾರ್ಕಿಂಗ್ ಇದೆ. ಕೆ.ಎಸ್.ಸಿ.ಎ. ಸದಸ್ಯರ ವಾಹನಗಳನ್ನು ಸೇಂಟ್ ಜೋಸೆಫ್ ಬಾಲಕರ ಶಾಲೆ ಮೈದಾನದಲ್ಲಿ ನಿಲ್ಲಿಸಲು ಸೂಚಿಸಲಾಗಿದೆ.

Related Posts

Leave a Reply

Your email address will not be published. Required fields are marked *