Menu

ಚಿನ್ನ ಕಳ್ಳಸಾಗಣೆ ಪ್ರಕರಣದ ರನ್ಯಾ ರಾವ್‌ಗೆ ಪತಿಯಿಂದ ವಿಚ್ಛೇದನ ಅರ್ಜಿ

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿ ಜೈಲು ಸೇರಿರುವ  ನಟಿ ರನ್ಯಾ ರಾವ್‌ಗೆ  ವಿಚ್ಛೇದನ ನೀಡಲು ಮುಂದಾಗಿ ಪತಿ ಜತೀನ್ ಹುಕ್ಕೇರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ವೈವಾಹಿಕ ಜೀವನದಲ್ಲಿ ಸಾಕಷ್ಟು ಮನಸ್ತಾಪಗಳು ಇರುವುದಾಗಿ ಈ ಹಿಂದೆ ಹೇಳಿಕೊಂಡಿದ್ದ ಜತೀನ್ ಹುಕ್ಕೇರಿ ಈಗ ವಿಚ್ಛೇದನ ಕೊಡಲು ಮುಂದಾಗಿದ್ದಾರೆ. ಫ್ಯಾಮಿಲಿ ಕೋರ್ಟ್‌ನಲ್ಲಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಚಿನ್ನಕಳ್ಳ ಸಾಗಣೆ ಪ್ರಕರಣದ ಮೂರನೇ ಆರೋಪಿ ಸಾಹಿಲ್‌ ಜೈನ್‌ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್‌ ಆದೇಶ ನೀಡಿದೆ.

ಬಳ್ಳಾರಿ ಮೂಲದ ಸಾಹಿಲ್ ಜೈನ್ ರನ್ಯಾ ರಾವ್ ಜೊತೆಗೆ ವಾಟ್ಸಪ್ ಚಾಟಿಂಗ್ ಮಾಡಿದ್ದ ಹಿನ್ನೆಲೆಯಲ್ಲಿ ಸಾಹಿಲ್ ಜೈನ್ ಬಂಧನಕ್ಕೆ ಒಳಗಾಗಿದ್ದ. ಈ ಹಿಂದಿನ ಪ್ರಕರಣದಲ್ಲಿ ಕೂಡ ಚಿನ್ನವನ್ನು ಮಾರಾಟ ಮಾಡುತ್ತಿದ್ದ ಹಾಗೂ ಹವಾಲಾ ನಂಟಿನ ಆರೋಪದಲ್ಲಿ ಸಾಹಿಲ್ ಜೈನ್ ಬಂಧಿತನಾಗಿದ್ದ. ಈ ಪ್ರಕರಣದಲ್ಲಿ ಬಂಧನದ ಬಳಿಕ ಸಾಹಿಲ್ ಜೈನ್‌ನನ್ನು ಡಿಆರ್‌ಐ ಅಧಿಕಾರಿಗಳು ಕೋರ್ಟ್‌ ಮುಂದೆ ಹಾಜರುಪಡಿಸಿ 7 ದಿನ ಕಸ್ಟಡಿಗೆ ಪಡೆದಿದ್ದರು. ಕಸ್ಟಡಿ ಅವಧಿ ಮುಕ್ತಾಯಗೊಂಡ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್‌ ಆದೇಶ ನೀಡಿದೆ.

Related Posts

Leave a Reply

Your email address will not be published. Required fields are marked *