Menu

ಜೇವರ್ಗಿಯಲ್ಲಿ ಲಾರಿಗೆ ಬಸ್‌ ಡಿಕ್ಕಿಯಾಗಿ ಐವರ ಸಾವು

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಮಿನಿ ಬಸ್​ ಡಿಕ್ಕಿ ಹೊಡೆದು ಐವರು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಶನಿವಾರ ನಸುಕಿನಜಾವ ಸಂಭವಿಸಿದ ಈ ಭೀಕರ ಅಪಘಾತದಲ್ಲಿ ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಸೇರಿ ಐವರು ಮೃತಪಟ್ಟಿದ್ದಾರೆ. ಮೃತಪಟ್ಟವರು ಬಾಗಲಕೋಟೆಯ ನವನಗರ ನಿವಾಸಿಗಳು. ಸ್ಥಳಕ್ಕೆ ನೆಲೋಗಿ ಠಾಣೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ.

ಕಲಬುರಗಿಯ ಖಾಜಾ ಬಂದೇನವಾಜ್​ ದರ್ಗಾಕ್ಕೆ ತೆರಳುವಾಗ ಘಟನೆ ನಡೆದಿದ್ದು, ಮಿನಿ ಬಸ್​​ನಲ್ಲಿದ್ದ 11 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕಲಬುರಗಿಯ ಜಿಮ್ಸ್​​ ಆಸ್ಪತ್ರೆಗೆ ದಾಖಲಿಸಲಾಗಿದೆ.

Related Posts

Leave a Reply

Your email address will not be published. Required fields are marked *