Menu

ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ನಿರ್ಬಂಧ: ಅರ್ಜಿ ವಿಚಾರಣೆ ನಿರಾಕರಿಸಿದ ಸುಪ್ರೀಂ

ಹದಿಮೂರು ವರ್ಷಕ್ಕಿಂತ ಕೆಳಗಿನ ಮಕ್ಕಳು ಸಾಮಾಜಿಕ ಮಾಧ್ಯಮಗಳನ್ನು ಬಳಸುವುದನ್ನು ನಿರ್ಬಂಧಿಸುವಂತೆ ಕೋರಿ ಜೆ಼ಪ್ಟ್‌ ಫೌಂಡೇಶನ್‌ ಪರವಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಕಾನೂನು ರೂಪಿಸಿ ಜಾರಿಗೆ ತರುವಂತೆ ಸಂಸತ್ತನ್ನು ಕೋರಿಕೊಳ್ಳಿ ಎಂದು ಸುಪ್ರೀಂಕೋರ್ಟ್‌ ಅರ್ಜಿದಾರರಿಗೆ ಸೂಚಿಸಿದೆ.
ಜೆ಼ಪ್ಟ್‌ ಫೌಂಡೇಶನ್‌ ಪರವಾಗಿ ಮೋಜಿನಿ ಪ್ರಿಯಾ ಎಂಬ ವಕೀಲರು ಉಚ್ಚ ನ್ಯಾಯಾಲಯಕ್ಕೆ ಈ ಅರ್ಜಿ ಸಲ್ಲಿಸಿದ್ದರು.

ಸಾಮಾಜಿಕ ಮಾಧ್ಯಮಗಳ ಬಳಕೆಯಿಂದ ಮಕ್ಕಳ ಮನಸ್ಸುಗಳ ಮೇಲಾಗುವ ದೈಹಿಕ, ಮಾನಸಿಕ ಪರಿಣಾಮವನ್ನು ಉಲ್ಲೇಖಿಸಿದ್ದರು. ಮಕ್ಕಳು ಅವುಗಳನ್ನು ಬಳಸುವುದನ್ನು ನಿಯಂತ್ರಿಸಲು ವಯಸ್ಸು ಪರಿಶೀಲನೆ, ಬಯೋಮೆಟ್ರಿಕ್‌ ಧೃಡೀಕರಣವನ್ನು ಕಡ್ಡಾಯಗೊಳಿಸಬೇಕು ಎಂದು ಕೋರಿದ್ದರು. ಮಕ್ಕಳ ಸುರಕ್ಷತಾ ನಿಯಮಗಳನ್ನು ಪಾಲಿಸದ ಸಾಮಾಜಿಕ ಮಾಧ್ಯಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ಕೇಳಿಕೊಳ್ಳಲಾಗಿತ್ತು.

ಈ ಅರ್ಜಿಗೆ ಪ್ರತಿಕ್ರಿಯಿಸಿರುವ ನ್ಯಾಯಮೂರ್ತಿ ಬಿ.ಆರ್‌. ಗವಾಯಿ ಮತ್ತು ಆಗಸ್ಟೀನ್‌ ಜಾರ್ಜ್‌ ಮಾಶಿ, ಇದು ಕಾನೂನಿನ ವ್ಯಾಪ್ತಿಗೆ ಒಳಪಡುತ್ತದೆ. ಈ ಬಗ್ಗೆ ಸಂಬಂಧಿಸಿದವರ ಎದುರು ಪ್ರಸ್ತಾಪಿಸಬೇಕು, ಅವರು ಅದನ್ನು ಎಂಟು ವಾರಗಳೊಳಗಾಗಿ ಪರಿಗಣಿಸಬೇಕು ಎಂದು ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *