ಕುಶಾಲನಗರ: ಬಿಜೆಪಿಯ ಸಕ್ರಿಯ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ಸಿನ ಇಬ್ಬರು ಶಾಸಕರ ಹೆಸರು ಎಫ್‍ಐಆರ್‍ನಲ್ಲಿ ಉಲ್ಲೇಖಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಮತ್ತು ಇತರ ಪ್ರಮುಖರನ್ನು ಪೊಲೀಸರು ಬಂಧಿಸಿದ್ದಾರೆ.
ಬಿಜೆಪಿ ಪ್ರಮುಖರು ಮತ್ತು ಕಾರ್ಯಕರ್ತರು ಕುಶಾಲನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆಗೆ ಮುಂದಾಗಿದ್ದರು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ವಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಕೆ.ಜಿ.ಬೋಪಯ್ಯ ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ, ರಾಜ್ಯ ಉಪಾಧ್ಯಕ್ಷ ಎಲ್. ನಾಗೇಂದ್ರ, ವಿಧಾನ ಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ಮೈಸೂರಿನ ಶಾಸಕ ಶ್ರೀವತ್ಸ, ಮೈಸೂರಿನ ಮಾಜಿ ಶಾಸಕ ಎಲ್.ನಾಗೇಂದ್ರ, ಬಿಜೆಪಿ ಕೊಡಗು ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ಅಧ್ಯಕ್ಷರಾದ ರಾಬಿನ್ ದೇವಯ್ಯ, ಭಾರತೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ದೇಣಿ, ಮೊದಲಾದವರು ಭಾಗವಹಿಸಿದ್ದರು ಹಾಗೂ ಅವರನ್ನು ಪೊಲೀಸರು ವಶಕ್ಕೆ ಪಡೆದರು.