Menu

ನಟಿ ಸಂಜನಾ ಗಲ್ರಾನಿಗೆ ವಂಚಿಸಿದಾತನಿಗೆ ದಂಡ, ಜೈಲು

ನಟಿ ಸಂಜನಾ ಗಲ್ರಾನಿ ಅವರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ತೋನ್ಸೆ ಎಂಬಾತನಿಗೆ ಬೆಂಗಳೂರಿನ ನ್ಯಾಯಾಲಯ 61.50 ಲಕ್ಷ ರೂ. ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

ಬನಶಂಕರಿ 3ನೇ ಹಂತದ ನಿವಾಸಿ ರಾಹುಲ್ ತೋನ್ಸೆ ಅಲಿಯಾಸ್ ರಾಹುಲ್ ಶೆಟ್ಟಿ ಸಂಜನಾ ಗಲ್ರಾನಿ ಅವರ ಸ್ನೇಹಿತ. ಆತ ಸಂಜನಾಗೆ ವಂಚಿಸಿರುವ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 33ನೇ ಎಸಿಜೆಎಂ ನ್ಯಾಯಾಲಯ ನ್ಯಾಯಾಧೀಶ ಪಿಎಸ್ ಸಂತೋಷ್ ಕುಮಾರ್‌ ದಂಡ ಮತ್ತು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದ್ದಾರೆ.

ದಂಡದ ಮೊತ್ತದಲ್ಲಿ 10 ಸಾವಿರ ರೂ. ಕೋರ್ಟ್ ಶುಲ್ಕವನ್ನು ಕಡಿತಗೊಳಿಸಿ ಉಳಿದ 61.40 ಲಕ್ಷ ರೂ.ವನ್ನು ಸಂಜನಾಗೆ ನೀಡಬೇಕು. ನಿಗದಿತ ಸಮಯದ ಒಳಗಡೆ ದಂಡದ ಮೊತ್ತವನ್ನು ಪಾವತಿ ಮಾಡಿದರೆ 6 ತಿಂಗಳ ಶಿಕ್ಷೆಯನ್ನು ಮಾಫಿ ಮಾಡಲಾಗುತ್ತದೆ. ಇಲ್ಲವಾದರೆ 6 ತಿಂಗಳು ಜೈಲು ಮತ್ತು ದಂಡವನ್ನು ಪಾವತಿ ಮಾಡಬೇಕೆಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ರಾಹುಲ್ ತೋನ್ಸೆ ಗೋವಾ ಮತ್ತು ಕೊಲಂಬೋದಲ್ಲಿ ಕ್ಯಾಸಿನೋಗಳ ನಿರ್ದೇಶಕ. ನಾನು ಹೇಳಿದ ಕಡೆಗಳಲ್ಲಿ ಹಣವನ್ನು ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ಸಿಗಲಿದೆ ಎಂದು ಸಂಜನಾಗೆ ಹೇಳಿದ್ದ. ರಾಹುಲ್‌ ಮಾತು ಕೇಳಿ 2018-19 ರಲ್ಲಿ 45 ಲಕ್ಷ ರೂ. ಸಂಜನಾ ಹೂಡಿಕೆ ಮಾಡಿದ್ದರು. ನಂತರ ಯಾವುದೇ ವ್ಯವಹಾರ ಆಗದೇ ವಂಚನೆ ಮಾಡಿದ್ದ. ಹೂಡಿಕೆ ಮಾಡಿದ್ದ ಹಣವನ್ನು ಮರಳಿಸುವಂತೆ ಒತ್ತಾಯ ಮಾಡಿದರೂ ರಾಹುಲ್‌ ಎರಡು ಚೆಕ್ ನೀಡಿದ್ದ. ಚೆಕ್‌ನಿಂದಲೂ ಹಣ ವಾಪಸ್ ಆಗದ ಹಿನ್ನೆಲೆ ಸಂಜನಾ ಇಂದಿರಾನಗರ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು.

Related Posts

Leave a Reply

Your email address will not be published. Required fields are marked *