Menu

ನಾಳೆ ಪಿಯು ಫಲಿತಾಂಶ ಪ್ರಕಟ ಮಧ್ಯಾಹ್ನ 1 ಗಂಟೆಯಿಂದ ವೆಬ್‌ಸೈಟ್‌ನಲ್ಲಿ ಲಭ್ಯ

ಬೆಂಗಳೂರು: ರಾಜ್ಯಾದ್ಯಂತ ಕಳೆದ ಮಾರ್ಚ್ .1ರಿಂದ 20ರವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವು ಮಂಗಳವಾರ ಪ್ರಕಟವಾಗಲಿದೆ.

ಮಂಗಳವಾರ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪ್ರಕಟಿಸಲಿದ್ದಾರೆ.

ಬಳಿಕ ಮಂಡಳಿ ವೆಬ್‌ಸೈಟ್‌ನಲ್ಲಿ ಮಧ್ಯಾಹ್ನ ಒಂದು ಗಂಟೆಗೆ ಲಿತಾಂಶವನ್ನು ಪ್ರಕಟಿಸಲಾಗುತ್ತದೆ. ನಂತರ ಎಲ್ಲ ಕಾಲೇಜುಗಳ ಸೂಚನಾ ಲಕದಲ್ಲಿ ಪ್ರಕಟಿಸಲಾಗುತ್ತದೆ. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುವ ಮೊಬೈಲ್ ಸಂಖ್ಯೆಗೂ ಲಿತಾಂಶವನ್ನು ರವಾನಿಸಲಾಗುತ್ತದೆ.

ಅಭ್ಯರ್ಥಿಗಳು ಲಿತಾಂಶವನ್ನು ವೀಕ್ಷಿಸಲು ಮಂಡಳಿ ಜಾಲತಾಣ https://karresults.nic.in ಭೇಟಿ ನೀಡಿ ತಮ್ಮ ನೋಂದಣಿ ಸಂಖ್ಯೆ ಹಾಗೂ ಜನ್ಮದಿನಾಂಕವನ್ನು ದಾಖಲಿಸಿ ಲಿತಾಂಶವನ್ನು ವೀಕ್ಷಿಸಬಹುದು.
ಮಾ.1ರಿಂದ 20ರವರೆಗೆ ನಡೆದಿದ್ದ ಪರೀಕ್ಷೆಗೆ 7.13 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡು ಪರೀಕ್ಷೆ ಬರೆದಿದ್ದರು. ಇದೇ ಮೊದಲ ಬಾರಿಗೆ ವೆಬ್‌ಕಾಸ್ಟಿಂಗ್ ವ್ಯವಸ್ಥೆಯಲ್ಲಿ ಸರೀಸೆಯು ಕಟು ವಿಟಾಗಿ ಮತ್ತು ಸುಸೂತ್ರವಾಗಿ ನಡೆಸಲಾಗಿತ್ತು.

ಫಲಿತಾಂಶ ನೋಡುವುದ್ಹೇಗೆ?

ಅಧಿಕೃತ ವೆಬ್‌ಸೈಟ್‌ಗೆ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು. ಹೋಂ ಪೇಜ್​ನಲ್ಲಿ, Second PU Results 2025 ಲಿಂಕ್ ಕ್ಲಿಕ್ ಮಾಡಬೇಕು. ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ನಮೂದಿಸಬೇಕು. Second PU Results 2025 ಎಂಬುದು ಸ್ಕ್ರೀನ್​ನಲ್ಲಿ ಕಾಣಿಸುತ್ತದೆ. ನಂತರ ರಿಸಲ್ಟ್ ನೋಡಬಹುದು. ಅಲ್ಲಿಯೇ ಪಿಡಿಎಫ್ ಡೌನ್​ಲೋಡ್ ಮಾಡಲು ಅವಕಾಶ ಇರುತ್ತದೆ.

Related Posts

Leave a Reply

Your email address will not be published. Required fields are marked *