ಸೈಬರ್ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಗೂ ತನಿಖೆಗಾಗಿ ಪ್ರತ್ಯೇಕವಾಗಿ ಸ್ಥಾಪಿಸಿರುವ ಸೈಬರ್ ತನಿಖಾ ಘಟಕಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಡಿಐಜಿಯಾಗಿ ಭೂಷಣ್ ಬೊರೆಸೆ ನೇಮಕಗೊಂಡಿದ್ದು, ಐಜಿಪಿ ಹಾಗೂ ಎಸ್ಪಿ ಸೇರಿ ದಂತೆ ಅಧಿಕಾರಿ-ಸಿಬ್ಬಂದಿ ನಿಯೋಜಿಸಲು ಸರ್ಕಾರ ಮುಂದಾಗಿದೆ. ಪ್ರಣವ್ ಮೊಹಂತಿ ಅವರಿಗೆ ಘಟಕದ ಮುಖ್ಯಸ್ಥ ರಾಗಿ ಹೊಣೆಗಾರಿಕೆ ನೀಡಲಾಗಿದ್ದು, ಅಧಿಕೃತ ಆದೇಶ ಹೊರ ಬೀಳಬೇಕಿದೆ.
ಸೈಬರ್ ಅಪರಾಧ ಕೃತ್ಯಗಗಳ ತನಿಖೆಗೆ ಪ್ರತ್ಯೇಕ ಘಟಕ ಸ್ಥಾಪಿಸುವಂತೆ ಸರ್ಕಾರಕ್ಕೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಪ್ರಸ್ತಾವನೆ ಸಲ್ಲಿಸಿದ್ದರು.
ಸೈಬರ್ ತನಿಖಾ ಘಟಕ ಸ್ಥಾಪನೆಗೆ 272 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಪೊಲೀಸ್ ಇಲಾಖೆ ಕೋರಿದ್ದು, ಮೊದಲ ಹಂತದಲ್ಲಿ 5 ಕೋಟಿ ಮಾತ್ರ ಬಿಡುಗಡೆಗೆ ಸರ್ಕಾರ ಸಮ್ಮತಿಸಿದೆ.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸರಿಯಾಗಿದ್ದಾಗ ಹೆಚ್ಚು ಬಂಡವಾಳ ಹರಿದು ಬರುತ್ತದೆ. ಬಂಡವಾಳ ಬಂದರೆ ಉದ್ಯೋಗ ಸೃಷ್ಟಿಯಾಗಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅನುಕೂಲವಾಗುತ್ತದೆ. ಪೊಲೀಸರು ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ನಿರ್ಭಯದ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.