ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು 10 ಪ್ರಮುಖ ಮಸೂದೆಗಳಿಗೆ ಒಪ್ಪಿಗೆ ನೀಡುವುದನ್ನು ತಡೆಹಿಡಿ ಯುವ ನಿರ್ಧಾರ ಕೈಗೊಂಡಿರುವುದು ಕಾನೂನುಬಾಹಿರ ಮತ್ತು ಅನಿಯಂತ್ರಿತ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಒಪ್ಪಿಗೆ ನೀಡದೆ ರಾಜ್ಯಪಾಲರು ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಕಾಯ್ದಿರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಸುಪ್ರೀಂ ಕೋರ್ಟ್ ನೀಡಿರುವ ಈ ತೀರ್ಪು, ಎಂ.ಕೆ. ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರಕ್ಕೆ ಬಹುದೊಡ್ಡ ಮುನ್ನಡೆಯಾಗಿದೆ. ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಕಾಯ್ದಿರಿಸಿದ ರಾಜ್ಯಪಾಲರ ಕ್ರಮ ಕಾನೂನುಬಾಹಿರ ಮತ್ತು ಅನಿಯಂತ್ರಿತವಾಗಿದೆ. ಹೀಗಾಗಿ ಈ ಕ್ರಮವನ್ನು ರದ್ದುಗೊಳಿಸಲಾಗಿದೆ. ವಿಧಾನಸಭೆಯು ಮಸೂದೆಗಳನ್ನು ಮತ್ತೊಮ್ಮೆ ಅಂಗೀಕರಿಸಿ ಮತ್ತೆ ಮಂಡಿಸಿದಾಗ ರಾಜ್ಯಪಾಲರು ಅವುಗಳನ್ನು ಅಂಗೀಕರಿಸಬೇಕಾಗಿತ್ತು ಎಂದು ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠ ಹೇಳಿದೆ. ರಾಜ್ಯಪಾಲ ರವಿ ಅವರು ಸದ್ಭಾವನೆಯಿಂದ ಕಾರ್ಯನಿರ್ವಹಿಸಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಸದನವು ಅಂಗೀಕರಿಸಿದ ಮಸೂದೆಯನ್ನು ತಮ್ಮ ಮುಂದೆ ಮಂಡಿಸಿದಾಗ ರಾಜ್ಯಪಾಲರು ತಮ್ಮ ಒಪ್ಪಿಗೆ ನೀಡ ಬಹುದು, ಒಪ್ಪಿಗೆಯನ್ನು ತಡೆಹಿಡಿಯಬಹುದು ಅಥವಾ ಮಸೂದೆಯನ್ನು ರಾಷ್ಟ್ರಪತಿಗಳ ಪರಿಗಣನೆಗೆ ಕಾಯ್ದಿರಿಸ ಬಹುದು. ರಾಜ್ಯಪಾಲರು ಕೆಲವು ನಿಬಂಧನೆಗಳ ಮರುಪರಿಶೀಲನೆಗಾಗಿ ಮಸೂದೆಯನ್ನು ಸದನ ಅಥವಾ ಸದನಗಳಿಗೆ ಹಿಂತಿರುಗಿಸಬಹುದು. ಸದನವು ಅದನ್ನು ಮತ್ತೆ ಅಂಗೀಕರಿಸಿದರೆ ರಾಜ್ಯಪಾಲರು ಒಪ್ಪಿಗೆ ತಡೆಹಿಡಿಯಬಾರದು. ಸಂವಿಧಾನ, ರಾಜ್ಯ ನೀತಿಯ ನಿರ್ದೇಶನ ತತ್ವಗಳು ಅಥವಾ ರಾಷ್ಟ್ರೀಯ ಪ್ರಾಮುಖ್ಯತೆಯ ವಿಷಯಕ್ಕೆ ವಿರುದ್ಧವಾಗಿದೆ ಎಂದು ಅನಿಸುವ ಮಸೂದೆಯನ್ನು ರಾಷ್ಟ್ರಪತಿಗಳ ಪರಿಗಣನೆಗೆ ಕಾಯ್ದಿರಿಸಬಹುದು ಎಂದು ನ್ಯಾಯಾಲಯ ತಿಳಿಸಿದೆ.
ರಾಜ್ಯಪಾಲರು ಮಸೂದೆಗೆ ಒಪ್ಪಿಗೆಯನ್ನು ತಡೆಹಿಡಿಯಲು ಮತ್ತು ಮಂತ್ರಿ ಮಂಡಳಿಯ ಸಹಾಯ ಮತ್ತು ಸಲಹೆ ಯೊಂದಿಗೆ ರಾಷ್ಟ್ರಪತಿಗಳ ಪರಿಶೀಲನೆಗೆ ಕಾಯ್ದಿರಿಸಲು ನ್ಯಾಯಾಲಯವು ಒಂದು ತಿಂಗಳ ಗಡುವನ್ನು ನಿಗದಿಪಡಿಸಿದೆ. ಸಚಿವ ಸಂಪುಟದ ಸಹಾಯ ಮತ್ತು ಸಲಹೆಯಿಲ್ಲದೆ ಮಸೂದೆಯನ್ನು ಕಾಯ್ದಿರಿಸಿದಾಗ ಈ ಗಡುವು ಮೂರು ತಿಂಗಳು ಗಳಾಗಿರುತ್ತದೆ. ರಾಜ್ಯ ವಿಧಾನಸಭೆಯಿಂದ ಪುನರ್ವಿಮರ್ಶೆಯ ನಂತರ ಮಸೂದೆಯನ್ನು ರಾಜ್ಯಪಾಲರಿಗೆ ಮಂಡಿಸಿ ದರೆ ಅವರು ಒಂದು ತಿಂಗಳೊಳಗೆ ಅದನ್ನು ಅಂಗೀಕರಿಸಬೇಕು. 200 ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರು ಮಾಡುವ ಯಾವುದೇ ಕೆಲಸವೂ ನ್ಯಾಯಾಂಗ ಪರಿಶೀಲನೆಗೆ ಒಳಪಟ್ಟಿರುತ್ತದೆ ಎಂದು ಕೋರ್ಟ್ ಹೇಳಿದೆ.
ಯಾವುದೇ ರೀತಿಯಲ್ಲಿ ರಾಜ್ಯಪಾಲರ ಅಧಿಕಾರವನ್ನು ದುರ್ಬಲಗೊಳಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ರಾಜ್ಯಪಾಲರ ಎಲ್ಲಾ ಕ್ರಮಗಳು ಸಂಸದೀಯ ಪ್ರಜಾಪ್ರಭುತ್ವದ ತತ್ವಕ್ಕೆ ಹೊಂದಿಕೆಯಾಗಬೇಕು. ಕೇಂದ್ರ ತನಿಖಾ ದಳ ದಲ್ಲಿಯೂ ಕೆಲಸ ಮಾಡಿರುವ ಮಾಜಿ ಐಪಿಎಸ್ ಅಧಿಕಾರಿ ಆರ್.ಎನ್.ರವಿ 2021 ರಲ್ಲಿ ತಮಿಳುನಾಡು ರಾಜ್ಯಪಾಲ ರಾಗಿ ಅಧಿಕಾರ ವಹಿಸಿಕೊಂಡರು. ಸಂವಿಧಾನವು ಶಾಸನಕ್ಕೆ ತಮ್ಮ ಒಪ್ಪಿಗೆಯನ್ನು ತಡೆಹಿಡಿಯಲು ಅವರಿಗೆ ಅಧಿಕಾರ ನೀಡುತ್ತದೆ ಎಂದು ಅವರು ಹೇಳಿದ್ದರು.
ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಈ ತೀರ್ಪನ್ನು ಐತಿಹಾಸಿಕ ಎಂದು ಬಣ್ಣಿಸಿ ದ್ದಾರೆ. ಇದು ತಮಿಳುನಾಡಿಗೆ ಮಾತ್ರವಲ್ಲ, ಎಲ್ಲಾ ಭಾರತೀಯ ರಾಜ್ಯಗಳಿಗೆ ದೊಡ್ಡ ಗೆಲುವು. ಡಿಎಂಕೆ ರಾಜ್ಯದ ಸ್ವಾಯ ತ್ತತೆ ಮತ್ತು ಫೆಡರಲ್ ರಾಜಕೀಯಕ್ಕಾಗಿ ಹೋರಾಡುವುದನ್ನು ಮತ್ತು ಗೆಲ್ಲುವುದನ್ನು ಮುಂದುವರಿಸುತ್ತದೆ ಎಂದು ಹೇಳಿ ದ್ದಾರೆ.