Menu

ಬೆಂಗಳೂರಿನಲ್ಲಿ ಪತಿ, ಪತ್ನಿ, ಮಕ್ಕಳು ಸೇರಿ ಕುಟುಂಬವೇ ಆತ್ಮಹತ್ಯೆ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದಾಶಿವನಗರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ.

ಪತಿ ಅನೂಪ್‌ ಕುಮಾರ್‌, ಪತ್ನಿ ರಾಖಿ, ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡವರು. ಈ ಆತ್ಮಹತ್ಯೆಗೆ ಕಾರಣ ಏನು ಎಂಬುದು ಗೊತ್ತಾಗಿಲ್ಲ. ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ನೀಡಬೇಕಿದೆ. ಸಾಲಬಾಧೆ ತಾಳಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ದಂಪತಿ ಮಕ್ಕಳಿಗೆ ವಿಷ ನೀಡಿ ಸಾಯಿಸಿದ ಬಳಿಕ ತಾವು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಅನೂಪ್‌ ಸಾಫ್ಟ್ವೇರ್‌ ಕಂಪೆನಿಯ ಉದ್ಯೋಗಿ. ಹೆಣ್ಣುಮಗುವಿಗೆ ಸ್ವಲ್ಪ ಆರೋಗ್ಯ ಸಮಸ್ಯೆ ಕಾಡುತ್ತಿತ್ತು ಎಂಬ ವಿಚಾರ ತಿಳಿದು ಬಂದಿದೆ.

Related Posts

Leave a Reply

Your email address will not be published. Required fields are marked *