ಆಂಧ್ರಪ್ರದೇಶ ಡಿಸಿಎಂ ಹಾಗೂ ನಟ ಪವನ್ ಕಲ್ಯಾಣ್ ಪುತ್ರ ಸಿಂಗಾಪುರದ ಶಾಲೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ.
ಪವನ್ ಕಲ್ಯಾಣ್ ಕಿರಿಯ ಪುತ್ರ ಮಾರ್ಕ್ ಶಂಕರ್ ಶಾಲೆಯಲ್ಲಿ ಸಂಭವಿಸಿದ ಅಗ್ನಿ ಅವಘಢದಲ್ಲಿ ಕೈ ಮತ್ತು ಕಾಲಿಗೆ ಗಾಯವಾಗಿದ್ದು, ತಲೆಗೆ ಸಣ್ಣ ಪ್ರಮಾಣದ ಪೆಟ್ಟು ಬಿದ್ದಿದ್ದು, ಹೊಗೆಯ ಕಾರಣ ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ.
ಮಾರ್ಕ್ ಶಂಕರ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವ ಪವನ್ ಕಲ್ಯಾಣ್ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.
ವಿಶಾಖಪಟ್ಟಣದ ಮೈನಾಮ್ ನಲ್ಲಿ ಅಲ್ಲುರಿ ಸೀತಾರಾಮ ನಿವಾಸಕ್ಕೆ ಭೇಟಿ ನೀಡಲು ತೆರಳಿದ್ದಾಗ ಮಂಗಳವಾರ ಮುಂಜಾನೆ ದುರ್ಘಟನೆಯ ಮಾಹಿತಿ ಬಂದಿದ್ದು ಕೂಡಲೇ ಪ್ರವಾಸ ರದ್ದುಗೊಳಿಸಿ ಸಿಂಗಾಪುರಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.