Menu

ಲಾರಿ ಚಾಲಕನ ಪುತ್ರಿ ಕಲಾ ವಿಭಾಗದಲ್ಲಿ ಪ್ರಥಮ

puc result

ಬೆಂಗಳೂರು: ದ್ವಿತೀಯ ಪಿಯುಸಿಯ ಈ ಬಾರಿಯ ಫಲಿತಾಂಶದಲ್ಲಿ ಲಾರಿ ಚಾಲಕನ ಪುತ್ರಿಯೊಬ್ಬಳು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿರುವುದು ವಿಶೇಷ.

ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಿಯು ಕಾಲೇಜಿನ ವಿದ್ಯಾರ್ಥಿನಿ ಸಂಜನಾಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

600ಕ್ಕೆ 597 ಅಂಕ ಪಡೆದ ಸಂಜನಾಬಾಯಿ, ಕಲಾ ವಿಭಾದಲ್ಲಿ ಮೊದಲ ಸ್ಥಾನ ಗಳಿಸುವ ಮೂಲಕ ವಿಜಯನಗರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದ ಸಂಜನಾಬಾಯಿ ಲಾರಿ ಡ್ರೈವರ್ ಮಗಳಾಗಿದ್ದು, ವಿದ್ಯಾಭ್ಯಾಸದಲ್ಲಿ ತನ್ನ ನಿರಂತರ ಪರಿಶ್ರಮದಿಂದ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ರಾಜ್ಯಕ್ಕೆ ದ್ವಿತೀಯ ಸ್ಥಾನ:

ವಿಜಯನಗರ ಜಿಲ್ಲೆಯ ಇಟಗಿಯ ಪಂಚಮಸಾಲಿ ಪಿಯು ಕಾಲೇಜಿನ ನಿರ್ಮಲಾ ಎಂಬ ವಿದ್ಯಾರ್ಥಿನಿ ಕಲಾ ವಿಭಾಗದಲ್ಲಿ 600ಕ್ಕೆ 596 ಅಂಕ ಪಡೆದಿದ್ದು, ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ.
ಕಳೆದ ಹಲವು ವರ್ಷಗಳಿಂದ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಿಯು ಕಾಲೇಜಿನ ವಿದ್ಯಾರ್ಥಿಗಳು ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸುಕೊಂಡು ಬರುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.

Related Posts

Leave a Reply

Your email address will not be published. Required fields are marked *