Saturday, October 03, 2026
Menu

ಮಾಜಿ ಸಚಿವ ಬಿ.ನಾಗೇಂದ್ರಗೆ 1.25 ಕೋಟಿ ದಂಡ ವಿಧಿಸಿದ ಕೋರ್ಟ್

nagendra

ಬೆಂಗಳೂರು: ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಮೂವರಿಗೆ 1.25 ಕೋಟಿ ರೂ. ದಂಡ ವಿಧಿಸಿ 42ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ.

42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಜಡ್ಜ್‌ ಕೆ.ಎನ್.ಶಿವಕುಮಾರ್‌ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳಿಗೆ 1.25 ಕೋಟಿ ದಂಡ ಪಾವತಿಸುವಂತೆ ಆದೇಶಿಸಿದ್ದಾರೆ.

ವಿಎಸ್ಎಲ್ ಸ್ಟೀಲ್ಸ್ ಲಿಮಿಟೆಡ್ ಚೆಕ್ ಬೌನ್ಸ್ ಕೇಸ್ ದಾಖಲಿಸಿತ್ತು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ವರಿಗೆ ನ್ಯಾಯಾಲಯ ದಂಡ ವಿಧಿಸಿದ್ದು, ದಂಡ ಪಾವತಿಸದಿದ್ದರೆ 1 ವರ್ಷ ಸೆರೆವಾಸ ಅ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

Related Posts

Leave a Reply

Your email address will not be published. Required fields are marked *