ಬೆಂಗಳೂರು: ಕನ್ನಡ ಮಾಧ್ಯಮದ ಡಿಜಿಟಲ್ ಮಾಧ್ಯಮದ ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮ್‌ಸುಂದರ್ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ.
ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ಶ್ಯಾಮ್‌ಸುಂದರ್ ಅವರನ್ನು ವಿದ್ಯಾಪೀಠ ಸರ್ಕಲ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಮವಾರ ರಾತ್ರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಸುವರ್ಣ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ಹಲವು ಟಿವಿ ಮಾಧ್ಯಮದಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು, ನಂತರ ಡಿಜಿಟಲ್ ಮಾಧ್ಯಮದಲ್ಲಿ ಸೇವೆ ಸಲ್ಲಿಸಿದ್ದು, ಸುವರ್ಣ ನ್ಯೂಸ್, ಒನ್ ಇಂಡಿಯಾ ಸೇರಿದಂತೆ ಹಲವು ಡಿಜಿಟಲ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ.
ಅವಿವಾಹಿತರಾಗಿದ್ದ ಶ್ಯಾಮ್‌ಸುಂದರ್ ಅವರು ಎದ್ದೇಳು ಮಂಜುನಾಥ ಸಿನಿಮಾದಲ್ಲಿ ಬ್ಯಾಂಕ್ ಮ್ಯಾನೇಜರ್ ಪಾತ್ರವನ್ನೂ ನಿರ್ವಹಿಸಿದ್ದರು. ಪತ್ರಕರ್ತರ ಬಳಗದಲ್ಲಿ ಶಾಮಿ ಎಂದೇ ಪ್ರಸಿದ್ಧಿ ಪಡೆದಿದ್ದರು.